Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಕಾಂಗ್ರೆಸ್‌ ಅಭ್ಯರ್ಥಿ ರಹೀಮ್‌ ಖಾನ್‌ ಬೆಂಬಲಿಗರ ಗಡಿಪಾರು

Monday, 30.04.2018, 10:16 AM       No Comments

ಬೀದರ್‌: ಬೀದರ್‌ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಹೀಮ್‌ ಖಾನ್‌ ಅವರ ಬೆಂಬಲಿಗರನ್ನು ಗಡಿಪಾರು ಮಾಡಿ ಜಿಪಂ ಸಿಇಒ ಸೇಲ್ವಮಣಿ ಆದೇಶ ಹೊರಡಿಸಿದ್ದಾರೆ.

ಬಸವರಾಜ ಬುಯ್ಯ ಮತ್ತು ವಿಠ್ಠಲ್‌ ಎಂಬವರ ವಿರುದ್ಧ ಚುನಾವಣೆ ಅಕ್ರಮ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಏ. 24ರಂದು ನಾಮಪತ್ರ ಸಲ್ಲಿಕೆ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿತ್ತು. ಈ ವೇಳೆ 500 ರೂ. ಮುಖಬೆಲೆಯ ನೋಟಿನ ಕಂತೆ ಹಿಡಿದು ಮತದಾರರಿಗೆ ಹಂಚಿಕೆ ಮಾಡಿದ್ದರು. ಈ ದೃಶ್ಯಾವಳಿಯು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಬೀದರ್​​ನ ಗಣೇಶ ಮೈದಾನದಲ್ಲಿ ಹಣ ಹಂಚುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣ ಸಂಬಂಧ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top