23.2 C
Bangalore
Saturday, December 14, 2019

ಸಿದ್ದು ವಿರುದ್ಧ ಹಿರಿಯ ಮುಖಂಡರ ಒಟ್ಟಾಟ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಬೆಂಗಳೂರು: ಸಂಪುಟ ಪುನಾರಚನೆ ಹಾಗೂ ಖಾತೆಗಳ ಹಂಚಿಕೆ ವಿಚಾರದಲ್ಲಿ ಮೇಲುಗೈ ಸಾಧಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸಿಗರು ಒಗ್ಗೂಡಿದ್ದು, ಸದ್ಯದಲ್ಲಿ್ಲುೕ ಹೈಕಮಾಂಡ್ ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಭೇಟಿ ಮಾಡಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ತೀರ್ವನಿಸಲಾಗಿದೆ. ದೆಹಲಿ ಮಟ್ಟದಲ್ಲಿ ಪ್ರಭಾವಿಗಳಾಗಿರುವ ರಾಜ್ಯದ ಮುಖಂಡರು ಈ ವಿಚಾರದಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮತ್ತೊಂದು ಸುತ್ತಿನ ಸಭೆ ಬಳಿಕ ಹೈಕಮಾಂಡ್ ಭೇಟಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.

ದೆಹಲಿಯಲ್ಲಿ ಬುಧವಾರ ರಾತ್ರಿಯೇ ಸಭೆ ನಡೆಯಬೇಕಾಗಿತ್ತು. ಸಂಸತ್​ನಲ್ಲಿ ತ್ರಿವಳಿ ತಲಾಕ್ ಕುರಿತ ಚರ್ಚೆ ಮುಗಿಯುವುದು ತಡವಾಯಿತು. ಖರ್ಗೆ ಇಡೀ ದಿನ ಸಂಸತ್​ನಲ್ಲಿಯೇ ಬ್ಯುಸಿ ಇದ್ದರು, ಸಂಜೆ ವೇಳೆಗೆ ಕೆಲ ಮುಖಂಡರು ದೆಹಲಿಯಿಂದ ತೆರಳಿದ್ದರಿಂದ ಸಭೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ.

ಹೈಕಮಾಂಡ್ ಸಿದ್ದರಾಮಯ್ಯ ಮಾತಿಗೆ ಮಾತ್ರ ಮನ್ನಣೆ ನೀಡುತ್ತಿದೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕೆಂದು ದೆಹಲಿಯಲ್ಲಿ ಸಭೆ ನಡೆದ ಸಂದರ್ಭದಲ್ಲಿ ಇಲ್ಲಿಯೇ ಇದ್ದ ಖರ್ಗೆ ಹಾಗೂ ಇತರರನ್ನು ಸಂರ್ಪಸಿಲ್ಲ. ಖಾತೆಗಳ ಹಂಚಿಕೆಯಲ್ಲೂ ಇದೇ ರೀತಿ ವರ್ತಿಸಲಾಗಿದೆ. ಇದು ಸರಿಯಲ್ಲ. ರಾಜ್ಯದಲ್ಲಿ ಪಕ್ಷ ಕಟ್ಟಿದ, ಸಂಕಷ್ಟದ ವೇಳೆ ಉಳಿಸಿಕೊಂಡು ಬಂದಿರುವ ನಾಯಕರನ್ನು ಕಡೆಗಣಿ ಸುವುದು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಒಳ್ಳೆಯದಲ್ಲ ಎಂಬುದನ್ನು ಹೈಕಮಾಂಡ್​ಗೆ ಮನವರಿಕೆ ಮಾಡಿಕೊಡಲು ಮುಖಂಡರು ನಿರ್ಧರಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ನಿಗಮ-ಮಂಡಳಿ ನೇಮಕ ವಿಚಾರದಲ್ಲೂ ಹಿರಿಯ ಮುಖಂಡರನ್ನು ಕಡೆಗಣಿಸಲಾಗಿದೆ. ಸೌಜನ್ಯಕ್ಕೂ ಚರ್ಚೆ ನಡೆಸಿಲ್ಲ ಎಂಬುದು ಮತ್ತೊಂದು ಅಸಮಾಧಾನ.

ವೇಣುಗೋಪಾಲ್ ವಿರುದ್ಧವೂ ಅತೃಪ್ತಿ

ಸಿದ್ದರಾಮಯ್ಯ ಮಾತ್ರವಲ್ಲದೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧವೂ ಹಿರಿಯ ನಾಯಕರಿಗೆ ಆಕ್ರೋಶ ಇದೆ. ಸಿದ್ದರಾಮಯ್ಯಗೆ ಹೆಚ್ಚಿನ ಆದ್ಯತೆ ನೀಡಿ ಇತರರನ್ನು ವೇಣುಗೋಪಾಲ್ ಕಡೆಗಣಿಸುತ್ತಿದ್ದಾರೆ. ಇದು ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರಲಿದೆ ಎಂಬ ಅಂಶವನ್ನು ರಾಹುಲ್ ಗಮನಕ್ಕೆ ತರಲು ಮೂಲ ಕಾಂಗ್ರೆಸಿಗರು ತೀರ್ವನಿಸಿದ್ದಾರೆ. ವೇಣುಗೋಪಾಲ್ ಬದಲಾಯಿಸಿ ಬೇರೊಬ್ಬರನ್ನು ಉಸ್ತುವಾರಿ ಯನ್ನಾಗಿ ನೇಮಕ ಮಾಡುವಂತೆಯೂ ಒತ್ತಾಯ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು. ಆದರೆ ಸಿದ್ದರಾಮಯ್ಯ ಅವರದೇ ನಾಯಕತ್ವ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರಿಗೆ ಕಡಿವಾಣ ಹಾಕುವಂತೆ ರಾಹುಲ್​ರಲ್ಲಿ ಕೋರಲಾಗುತ್ತದೆ ಎಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಸಂದರ್ಭ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದಾಗ ‘ವಿಸ್ತರಣೆ ಮಾಡಿಸಿದವರೆ ಶಮನ ಮಾಡಿಸಬೇಕು’ ಎಂದು ಖರ್ಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...