More

    ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಲಿ: ಮಾಜಿ ಸಚಿವೆ ಉಮಾಶ್ರೀ

    ವಿಜಯಪುರ: ಸ್ಥಳೀಯ ಸಂಸ್ಥೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ರಾಜಕೀಯವಾಗಿ ಸ್ಥಾನಮಾನ ಪಡೆಯಲು ಮಹಿಳೆಯರು ನಾಯಕತ್ವದ ಗುಣಗಳನ್ನು ರೂಪಿಸಿಕೊಳ್ಳಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.
    ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ಸ್ಥಾನಮಾನಗಳನ್ನು ನೀಡಲು ಕಾಂಗ್ರೆಸ್ ಬದ್ಧವಾಗಿದ್ದು, ಪಕ್ಷ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಪ್ರತಿಪಾದಿಸುವುದು ಅತ್ಯವಶ್ಯಕವಾಗಿದೆ. ಅದಕ್ಕಾಗಿ ‘ನಾ ನಾಯಕಿ’ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಎಐಸಿಸಿ ಹಾಗೂ ಕೆಪಿಸಿಸಿ ಆದೇಶದಂತೆ ‘ನಾ ನಾಯಕಿ’ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಆಯೋಜಿಸುವ ಮೂಲಕ ಮಹಿಳೆಯರನ್ನು ರಾಜಕೀಯವಾಗಿ ಆಹ್ವಾನಿಸಲಾಗುತ್ತಿದೆ. ಅದಕ್ಕೆ ಮಹಿಳೆಯರು ಈ ಕಾರ್ಯಕ್ರಮವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ಜು.19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆದಿದ್ದು, ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು, ಹಾಲಿ/ಮಾಜಿ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯದರ್ಶಿಗಳು/ಸದಸ್ಯರು, ಜಿಪಂ, ತಾಪಂ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಸದಸ್ಯರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಿಲ್ಲೆಯ ಎಲ್ಲ ಬ್ಲಾಕ್ ಅಧ್ಯಕ್ಷರು, ಜಿಲ್ಲಾಮಟ್ಟದ ಮುಂಚೂಣಿ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ತಪ್ಪದೆ ಭಾಗವಹಿಸುವಂತೆ ಸೂಚಿಸಿದರು.

    ಮಾಜಿ ಶಾಸಕ ವಿಠ್ಠಲ ಕಟಕಧೋಂಡ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ರಾಜಶೇಖರ ಎಸ್. ಮೆಣಸಿನಕಾಯಿ, ಸಂದೀಪ ಬಿ. ಬೆಳಗಲಿ, ಎಸ್.ಎಂ. ದುಂಡಸಿ, ಚಂದ್ರಶೇಖರ ರಾಠೋಡ, ಎಂ.ಡಿ. ಯಲಿಗಾರ, ಜಮೀರಅಹ್ಮದ ಬಕ್ಷಿ, ಆರತಿ ಶಹಾಪೂರ, ಎಸ್.ಬಿ. ಹಾರಿವಾಳ, ರಫೀಕ ಪಕಾಲಿ, ಆರ್.ಡಿ. ಹಕ್ಕೆ, ಶಾಹಜಾನ ಮುಲ್ಲಾ, ಗುರು ಎಂ. ತಾರನಾಳ, ಈರನಗೌಡ ಎಸ್. ಬಿರಾದಾರ, ಸಿದ್ದಣ್ಣ ಗೌಡನ್ನವರ, ಇಲಿಯಾಸ ಬೋರಾಮಣಿ, ಸಾಹೇಬಗೌಡ ಬಿರಾದಾರ, ವಸಂತ ಹೊನಮೊಡೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts