More

    ದೊಡ್ಡ ದೊಡ್ಡ ಹಾರ ಹಾಕಿದ ಮಾತ್ರಕ್ಕೆ ನನಗೆ ಖುಷಿಯಾಗುವುದಿಲ್ಲವೆಂದ ಕಾಂಗ್ರೆಸ್ ನಾಯಕ

    ಮಂಡ್ಯ: ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಸೋಲು ಅನುಭವಿಸಿದ್ದೇವೆ. ಆದ್ದರಿಂದ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ನಾಯಕರು ಒಗ್ಗಟ್ಟಿನಿಂದ ಪಂಚಾಯಿತಿ ಮತ್ತು ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಮುಂದಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದರು.

    ನಗರದ ಸೋಮೇಶ್ವರ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷದ ನಾಯಕರು ಒಗ್ಗಟ್ಟಿನಿಂದ ಜನರ ವಿಶ್ವಾಸ ಗಳಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಟ ಐದು ಸ್ಥಾನಗಳಲ್ಲಿ ನಾವು ಜಯಗಳಿಸಲು ಸಾಧ್ಯವಾಗುತ್ತದೆ. ದೊಡ್ಡ ದೊಡ್ಡ ಹಾರ ಹಾಕಿದರೆ ನನಗೆ ಖುಷಿಯಾಗಲ್ಲ. ಪಕ್ಷ ಬಲಿಷ್ಠವಾಗಿ ಚುನಾವಣೆಯಲ್ಲಿ ಗೆದ್ದಾಗ ಮಾತ್ರ ನನಗೆ ಖುಷಿಯಾಗುತ್ತದೆ. ಕಳೆದ ಎರಡು ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿದಿದ್ದಕ್ಕೆ ದಿನೇಶ್‌ಗೂಳಿಗೌಡ ಮತ್ತು ಮಧು ಜಿ. ಮಾದೇಗೌಡ ಗೆದ್ದರು. ಆಗ ನನಗೆ ಖುಷಿಯಾಯಿತು. ಹಾರ ತುರಾಯಿಗಳಿಂದ ಖುಷಿಪಡಿಸಲು ಸಾಧವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹೋರಾಡಿದರೆ ಮಾತ್ರ ಜಿಲ್ಲೆಯಲ್ಲಿ ಜಾ.ದಳವನ್ನು ಮಣಿಸಲು ಸಾಧ್ಯ ಎಂದು ಹೇಳಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ, ಪಿ.ಎಂ. ನರೇಂದ್ರಸ್ವಾಮಿ, ಎಂ.ಎಸ್. ಆತ್ಮಾನಂದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts