More

    ಡಿಕೆಶಿ ನೇತೃತ್ವದಲ್ಲಿ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ತೆಲಂಗಾಣ ಕಾಂಗ್ರೆಸ್

    ಹೈದರಾಬಾದ್​: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಕಾಂಗ್ರೆಸ್, ಇಂದು (ಡಿ.03) ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡಲು ತನ್ನ ಹಕ್ಕು ಮಂಡಿಸಿದೆ.

    ತೆಲಂಗಾಣ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಹೊಸದಾಗಿ ಆಯ್ಕೆಯಾದ 65 ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದೇವೆ. ನಾಳೆ ಬೆಳಗ್ಗೆ 9.30ಕ್ಕೆ ಎಲ್ಲ ಶಾಸಕರ ಸಭೆ ಕರೆದಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ನಮಗೆ ಒಂದು ಕಾರ್ಯವಿಧಾನವಿದೆ, ನಾವು ಅದನ್ನು ಅನುಸರಿಸುತ್ತೇವೆ ಎಂದರು.

    ಇನ್ನು ಶಾಸಕರ ಕುದುರೆ ವ್ಯಾಪಾರ ಭೀತಿ ಇರುವುದರಿಂದ ತನ್ನೆಲ್ಲ ಶಾಸಕರನ್ನು ಕಾಂಗ್ರೆಸ್​ ಪಕ್ಷ ಬೆಂಗಳೂರಿಗೆ ಸ್ಥಳಾಂತರ ಮಾಡಲಿದೆ ಎಂಬ ಸುದ್ದಿಯು ಹರಿದಾಡುತ್ತಿದೆ. ಲಕ್ಷುರಿ ಬಸ್​ಗಳ ವ್ಯವಸ್ಥೆ ಮಾಡಿ, ಇಂದು ರಾತ್ರಿ ಎಲ್ಲ ಶಾಸಕರನ್ನು ಕರೆತರಲಾಗುತ್ತದೆ ಎಂದು ಹೇಳಲಾಗಿದೆ.

    ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆ. ಚಂದ್ರಶೇಖರ್​ ರಾವ್​ ನೇತೃತ್ವದ ಭಾರತ್​ ರಾಷ್ಟ್ರ ಸಮಿತಿ (ಬಿಆರ್​ಎಸ್​)ಗೆ ತೆಲಂಗಾಣ ಮತದಾರರು ಶಾಕ್​ ನೀಡಿದ್ದು, ಈ ಬಾರಿ ಕಾಂಗ್ರೆಸ್​ ಮೇಲೆ ತಮ್ಮ ಒಲವು ತೋರಿದ್ದಾರೆ. ಅಖಂಡ ಆಂಧ್ರಪ್ರದೇಶದಿಂದ ಇಬ್ಭಾಗವಾಗಿ ಸ್ವತಂತ್ರ ತೆಲಂಗಾಣ ರಾಜ್ಯ ರಚನೆಯಾದಾಗಿನಿಂದ ಕೆ. ಚಂದ್ರಶೇಖರ್​ ರಾವ್​ ಅವರ ಬಿಆರ್​ಎಸ್​ ಪಕ್ಷ ಆಡಳಿತದಲ್ಲಿತ್ತು. ಎರಡು ದಶಕಗಳ ಆಡಳಿತಕ್ಕೆ ಈ ಬಾರಿ ಬ್ರೇಕ್​ ಬಿದ್ದಿದೆ.

    ಒಟ್ಟು 119 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್​ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೆಲಂಗಾಣದಲ್ಲಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಆಡಳಿತರೂಢ ಬಿಆರ್​ಎಸ್​ ಕೇವಲ 39 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. (ಏಜೆನ್ಸೀಸ್​)

    ಸಿಎಂ ಕೆಸಿಆರ್​, ಸಂಭಾವ್ಯ ಸಿಎಂ ರೇವಂತ್​ ರೆಡ್ಡಿಗೆ ಸೋಲುಣಿಸಿ ಎಲ್ಲರ ಹುಬ್ಬೇರಿಸಿದ ಬಿಜೆಪಿ ಅಭ್ಯರ್ಥಿ!

    ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ವಿಪಕ್ಷಗಳಿಗೆ ಖಡಕ್​ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts