More

    ಅನುದಾನ ಬಿಡುಗಡೆಗೂ ಹಣಕ್ಕೆ ಬೇಡಿಕೆ! ಕೈ ಶಾಸಕರಿಂದಲೇ ಗುರುತರ ಆರೋಪ, ಈ ಪತ್ರ ತಮ್ಮದಲ್ಲ ಎಂದ ಬಿ.ಆರ್.ಪಾಟೀಲ್

    ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಚನೆಯಾಗಿ ಎರಡು ತಿಂಗಳು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿಯೇ ಕಾಂಗ್ರೆಸ್‌ನ ಹಿರಿಯ ಶಾಸಕರು ಗಂಭೀರವಾಗಿ ದನಿ ಎತ್ತಿದ್ದಾರೆ.

    ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂಗೆ ಪತ್ರ ಬರೆದು ಸಹಿ ಸಂಗ್ರಹ ನಡೆಸಿದ್ದಾರೆ.

    20ಕ್ಕೂ ಹೆಚ್ಚು ಶಾಸಕರು ಪತ್ರಕ್ಕೆ ಸಹಿ ಹಾಕಿದ್ದು, ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರ ವಿಷಯ ಎಂದಿದ್ದಾರೆ.

    ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖವಿದೆ.

    ಶಾಸಕ ಬಿ.ಆರ್.ಪಾಟೀಲ್ ಲೆಟರ್ ಹೆಡ್‌ನಲ್ಲಿದ್ದು, ಹಲವು ಶಾಸಕರು ಸಹಿ ಹಾಕಿದ್ದಾರೆ. ಈ ಪತ್ರ ಸಂಚಲನ ಸೃಷ್ಟಿಯಾಗುತ್ತಿದ್ದಂತೆ ಈ ಪತ್ರ ತಮ್ಮದಲ್ಲ, ಅದು ನಕಲಿ ಎಂದು ಬಿ.ಆರ್.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

    ಅನುದಾನ ಬಿಡುಗಡೆಗೂ ಹಣಕ್ಕೆ ಬೇಡಿಕೆ! ಕೈ ಶಾಸಕರಿಂದಲೇ ಗುರುತರ ಆರೋಪ, ಈ ಪತ್ರ ತಮ್ಮದಲ್ಲ ಎಂದ ಬಿ.ಆರ್.ಪಾಟೀಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts