More

    ಕಾಂಗ್ರೆಸ್ ಶಾಸಕರ ಕ್ಷೇತ್ರದ ಅನುದಾನಕ್ಕೆ ಕತ್ತರಿ: ಅಮರೇಗೌಡ ಪಾಟೀಲ್ ಬಯ್ಯಪುರ ಆರೋಪ

    ಮಸ್ಕಿ: ಯಾವುದೇ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅನುದಾನ ಕಡಿತಮಾಡಿ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ನೀಡುತ್ತಿದ್ದಾರೆ ಎಂದು ಕುಷ್ಟಗಿಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ದೂರಿದರು.

    ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಷ್ಟಗಿ ಕ್ಷೇತ್ರದ ಅಭಿವೃದ್ಧಿಗೆ ಸಮಿಶ್ರ ಸರ್ಕಾರದಲ್ಲಿ ಮಂಜೂರಾಗಿದ್ದ 120 ಕೋಟಿ ರೂ. ಅನುದಾನ ವಾಪಸ್ ತೆಗೆದುಕೊಂಡು ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಹಂಚಿಕೆ ಮಾಡಿ ಸೇಡಿನ ರಾಜಕೀಯ ಮಾಡಿದ್ದಾರೆ.

    ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ಅಧಿಕಾರ ಬೇಕು. ಅದಕ್ಕಾಗಿ ಇವಿಎಂ ಯಂತ್ರಗಳ ದುರ್ಬಳಕೆ ಮಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಮತಪತ್ರಗಳ ಮೂಲಕ ಚುನಾವಣೆ ನಡೆಯಲಿ ಆಗ ಅವರ ಬಣ್ಣ ಬಯಲಾಗಲಿದೆ ಎಂದರು.

    ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೊಡ್ಡ ಪಕ್ಷ, ಪಕ್ಷದ ರಾಜ್ಯಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಇರುವ ಕಾರಣ ಅಧ್ಯಕ್ಷರ ಆಯ್ಕೆ ವಿಳಂಬವಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts