More

    ಚುನಾವಣೆ ಬಂದರೆ ಸಾಕು ಎಚ್​​ಡಿಕೆಗೆ ಹಾರ್ಟ್​ ಸಮಸ್ಯೆ ಬರುತ್ತೆ: ವ್ಯಂಗ್ಯವಾಡಿದ ಕಾಂಗ್ರೆಸ್ ಶಾಸಕ

    ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಹೃದಯ ಸಂಬಂಧಿ ಖಾಯಿಲೆ ಇದೆ ಅಂತ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಮೇಶ್​ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ.

    ಲೋಕಸಭೆ ಚುನಾವಣೆ ನಿಮಿತ್ತ ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ರಮೇಶ್​, ಮೂರೇ ದಿನದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಆಗುತ್ತದೆ. ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ, ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

    ಸಚಿವ ಚಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆ ಹೆಚ್​ಡಿ ಕುಮಾರಸ್ವಾಮಿಯವರಿಗೂ ಇದೆ.  ಚಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೆ, ಹೆಚ್​ಡಿ ಕುಮಾರಸ್ವಾಮಿ ಹೇಗೆ ಶಸ್ತ್ರಚಿಕಿತ್ಸೆಯಾದ ಎರಡೇ ದಿನಕ್ಕೆ ರಾಜ್ಯ ಸುತ್ತುತ್ತಾರೆ. ಈ ಹೊಸ ಟೆಕ್ನಿಕ್​ ಹೇಗೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಟೀಕಿಸಿದ್ದಾರೆ.

    ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಜನರ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೇ ಕೇಳಬೇಡಿ. ಅಧಿಕಾರದಲ್ಲಿ ಇದ್ದಾಗ ಏನ್ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಕಾಂಗ್ರೆಸ್ ಅಭ್ಯರ್ಥಿಗೆ ಅತಿಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಮೇಶ್​ ಬಂಡಿಸಿದ್ದೇಗೌಡ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts