ಪಿಎಸ್ಐ ಪರಶುರಾಮ್ ಸಾವಿನ ಹಿಂದೆ ಕಾಂಗ್ರೆಸ್ ಶಾಸಕರ ಕೈವಾಡ ಇಲ್ಲ: ಸಚಿವ ಎಂ.ಬಿ ಪಾಟೀಲ್

blank

ಬೆಂಗಳೂರು: ಪೊಲೀಸ್ ಎಸ್ಐ ಒಬ್ಬರು ಸತ್ತಿರುವುದರ ಹಿಂದೆ ಅಲ್ಲಿನ ಕಾಂಗ್ರೆಸ್ ಶಾಸಕರ ಕೈವಾಡವೇನೂ‌ ಇಲ್ಲ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಇದನ್ನೂ ಓದಿ: ಹಾಕಿಯಲ್ಲಿ ಬ್ರಿಟನ್​ಗೆ ಆಘಾತ: ಪೆನಾಲ್ಟಿ ಶೂಟೌಟ್​ನಲ್ಲಿ ಗೆದ್ದು ಸೆಮಿಗೆ ಲಗ್ಗೆಯಿಟ್ಟ ಭಾರತ! ಪದಕಕ್ಕೆ ಇನ್ನೊಂದೇ ಹೆಜ್ಜೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಪ್ರತಿಯೊಂದಕ್ಕೂ ಶಾಸಕರು ಮತ್ತು ಮಂತ್ರಿಗಳನ್ನು ದೂರುವುದು ಒಂದು ಕಾಯಿಲೆಯಾಗಿದೆ ಎಂದು ಸಚಿವರು ಬೇಸರ ಹೊರಹಾಕಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹಿಂದೆ ಬಿಜೆಪಿ ಜೊತೆ, ಆಮೇಲೆ ಕಾಂಗ್ರೆಸ್ ಜೊತೆ ಸೇರಿಕೊಂಡು ಸರ್ಕಾರ ರಚಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. ಈಗ ಪುನಃ ಬಿಜೆಪಿ ಜೊತೆ ಹೋಗಿದ್ದಾರೆ. ಅವರದು ಅವಕಾಶವಾದಿ ಮೈತ್ರಿ. ಅವರು ತಮ್ಮ ಸರ್ಕಾರವನ್ನೇ ಉಳಿಸಿಕೊಳ್ಳಲಿಲ್ಲ. ಈಗ ನಮ್ಮ ಸರ್ಕಾರವನ್ನು ಉರುಳಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಟೀಕಿಸಿದ್ದಾರೆ.

ಭಾನುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ‌ ನೈತಿಕ ಬೆಂಬಲವೂ ಇಲ್ಲ ಎಂದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರಷ್ಟೆ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಯಾವ ತಪ್ಪೂ ಇಲ್ಲ. ಸ್ವತಃ ಮುಡಾ ತಪ್ಪು ಮಾಡಿ, ಅದನ್ನು ಒಪ್ಪಿಕೊಂಡಿದೆ. ನಿಯಮಗಳಂತೆಯೇ ಸಿಎಂ ಪತ್ನಿಗೆ ಬದಲಿ ನಿವೇಶನಗಳನ್ನು ಅದು ಕೊಟ್ಟಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರು ಸಚಿವರ ಸಭೆ ಕರೆದಿರುವುದರಲ್ಲಿ ತಪ್ಪೇನೂ ಇಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರು ನಮಗೆ ಸಲಹೆ ಕೊಡಬಹುದಷ್ಟೆ. ಇದಕ್ಕಿಂತ ಹೆಚ್ಚು ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ವರ್ಗಾವಣೆಯಿಂದ ಹಣ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ: ಬಸವರಾಜ ಬೊಮ್ಮಾಯಿ

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…