ರಿವರ್ಸ್‌ ಆಪರೇಷನ್‌ ತಪ್ಪಿಸಿಕೊಳ್ಳಲು ರೆಸಾರ್ಟ್ ಮೊರೆಹೋದ ಬಿಜೆಪಿ ಶಾಸಕರು, ಅತ್ತ ಕಾಂಗ್ರೆಸ್​ ಶಾಸಕರು ಹೋಟೆಲ್​ನಲ್ಲಿ ವಾಸ್ತವ್ಯ!

Latest News

ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಉತ್ತರಕನ್ನಡ: ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ಭಾನುವಾರ ದುರ್ಘಟನೆ ಸಂಭವಿಸಿದೆ. ಅಫ್ರೋಜ್...

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ ಪಕ್ಕಾ? ಕುತೂಹಲಕ್ಕೆ ಕಾರಣವಾಯ್ತು ಅಮಿತ್​ ಷಾ ಮಾತು…

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತಂಕ ಬೇಡ. ಅಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್​...

ಚಾಂಪಿಯನ್ ಪಟ್ಟ ಅಲಂಕರಿಸಿದ ಆರು ತಂಡ

ಸಣ್ಣುವಂಡ ಕಿಶೋರ್ ನಾಚಪ್ಪ ಪೊನ್ನಂಪೇಟೆಕೋದಂಡ ಎ.ಪೂವಯ್ಯ ಜ್ಞಾಪಕಾರ್ಥ ಹಾಕಿಕೂರ್ಗ್ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ...

ಜನರಿಗೆ ದುಃಸ್ವಪ್ನವಾಗಿ ಕಾಡಿದ್ದ ‘ಒಸಮಾ ಬಿನ್​ ಲಾಡೆನ್​’ ಇನ್ನಿಲ್ಲ; ಸಾಯುವ ವೇಳೆ ಆತ ‘ಕೃಷ್ಣ’ ನಾಗಿ ಬದಲಾಗಿದ್ದ…

ಗುವಾಹಟಿ: ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯ ಸುತ್ತಮುತ್ತಲಿನ ಜನರನ್ನು ಇನ್ನಿಲ್ಲದಂತೆ ಕಾಡಿದ್ದ ಒಸಮಾ ಬಿನ್​ ಲಾಡೆನ್​ ಮೃತಪಟ್ಟಿದ್ದಾನೆ. ಈ ಒಸಮಾ ಬಿನ್​ ಲಾಡೆನ್​ ಒಂದು ಕಾಡಾನೆ. ಅಲ್ಲಿನ...

ಬೆಂಗಳೂರು: ‘ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ… ವಿಶ್ವಾಸಮತ ಯಾಚಿಸ್ತೇನೆ’ ಅನ್ನೋ ಸಿಎಂ ಹೇಳಿಕೆಯಿಂದ ಕಂಗಾಲಾಗಿರುವ ಬಿಜೆಪಿ ನಾಯಕರು ‘ರಿವರ್ಸ್ ಆಪರೇಷನ್‌’ ಪ್ಲ್ಯಾನ್‌ಗೆ ಹೆದರಿ ತನ್ನ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಿದೆ.

ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ರಮಾಡಾ ರೆಸಾರ್ಟ್‌ ಹಾಗೂ ಸಾಯಿಲೀಲಾ ಹೋಟೆಲ್‌ನಲ್ಲಿ 35 ರೂಮ್‌ಗಳನ್ನು ಬುಕ್‌ ಮಾಡಿದ್ದು, ಕಮಲಕಲಿಗಳೆಲ್ಲ ಶಿಫ್ಟ್ ಆಗಿದ್ದಾರೆ. ವಿಧಾನಸೌಧಕ್ಕೆ 4 ಬಸ್‌ ತರಿಸಿಕೊಂಡು, ಆರ್.ಅಶೋಕ್, ರೇಣುಕಾಚಾರ್ಯ ನೇತೃತ್ವದಲ್ಲಿ 4 ಟೀಂ ರೆಸಾರ್ಟ್‌ಗೆ ಶಿಫ್ಟ್ ಆಗಿದೆ. ರೆಸಾರ್ಟ್‌ನ ಪೂರ್ತಿ ಉಸ್ತುವಾರಿಯನ್ನು ಯಲಹಂಕ ಶಾಸಕ ವಿಶ್ವನಾಥ್‌ ವಹಿಸಿಕೊಂಡಿದ್ದಾರೆ.

ದೋಸ್ತಿ ನಾಯಕರು ಬಿಜೆಪಿ ಶಾಸಕರಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಬಿಜೆಪಿಯ ‘ಆಪರೇಷನ್ ಕಮಲ’ದ ವಿರುದ್ಧ ‘ರಿವರ್ಸ್‌ ಆಪರೇಷನ್‌’ ಮಾಡಿ, ಸರ್ಕಾರ ಉಳಿಸಿಕೊಳ್ಳೋಕೆ ಮುಂದಾಗಿದ್ದಾರೆ. ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಕನಕಗಿರಿ ಶಾಸಕ ಬಸವರಾಜ್‌ ದಡೆಸುಗೂರು, ಮೈಸೂರು ಭಾಗದ ಮತ್ತೋರ್ವ ಬಿಜೆಪಿ ಶಾಸಕನಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ.

ಇನ್ನು ರಿವರ್ಸ್ ಆಪರೇಷನ್ ಭೀತಿ ಹಿನ್ನೆಲೆಯಲ್ಲಿ ಸೋಮವಾರದವರೆಗೂ ರೆಸಾರ್ಟ್‌ನಲ್ಲಿರುವ ಬಿಜೆಪಿ ಶಾಸಕರು, ಸೋಮವಾರ ಅಲ್ಲಿಂದಲೇ ವಿಧಾನಸೌಧಕ್ಕೆ ಆಗಮಿಸಿ ಕಲಾಪದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿವರೆಗೂ ರೆಸಾರ್ಟ್‌ನಲ್ಲೇ ಕುಳಿತು ರಣತಂತ್ರ ಹೆಣೆಯಲಿದ್ದಾರೆ.

ಹೋಟೆಲ್​ ವಾಸ್ತವ್ಯಕ್ಕೆ ಮುಂದಾದ ಕಾಂಗ್ರೆಸ್​ ಶಾಸಕರು

ಆಪರೇಷನ್ ಕಮಲ ತಪ್ಪಿಸಿಕೊಳ್ಳಲು ಕಾಂಗ್ರೆಸ್​ ಶಾಸಕರು ಯಶವಂತಪುರದಲ್ಲಿರುವ ತಾಜ್‌ ವೀವಂತ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನೂ ಜೆಡಿಎಸ್‌ನ 26 ಶಾಸಕರಿಗೂ ಆಪರೇಷನ್ ಕಮಲದಿಂದ ದೂರವಿರಲು ದೇವನಹಳ್ಳಿಯ ಕೊಡುಗೂರ್ಕಿ ಬಳಿ ಇರುವ ಗಾಲ್ಪ್ ಶೈರ್ ಕ್ಲಬ್ ರೆಸಾರ್ಟ್‌ನಲ್ಲಿ ತಂಗಿದ್ದಾರೆ. (ದಿಗ್ವಿಜಯ ನ್ಯೂಸ್)

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....