More

    ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಸಂಸದ ಇ ತುಕಾರಾಂ ರಾಜಿನಾಮೆ!

    ಬಳ್ಳಾರಿ: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಈ. ತುಕಾರಾಂ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‍ನ ಮತ್ತಿಬ್ಬರು ಅರೆಸ್ಟ್

    ಈ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.  ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು.

    ಇ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್‌ನ ಇ. ತುಕಾರಾಮ್‌ ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು.

    ಬೆಳಗ್ಗೆ ರಾಷ್ಟ್ರಗೀತೆಯೊಂದಿಗೆ ಶಾಲೆಗಳನ್ನು ಆರಂಭಿಸಲು ಜಮ್ಮು ಕಾಶ್ಮೀರ ಸರ್ಕಾರ ಸೂಚನೆ!

    See also  ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts