

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸಂಸತ್ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನ ಖಂಡಿಸಿ ಎಐಸಿಸಿ ಸುಧೀರ್ಘ ರಾಜಕೀಯ ಹೋರಾಟಕ್ಕೆ ಕರೆ ನೀಡಿದ್ದು ಪಕ್ಷದ ಸಭೆಯಲ್ಲಿ ಯುವ ನಾಯಕರು ಪ್ರಸ್ತಾಪ ಒಂದನ್ನು ಮುಂದಿರಿಸಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕ್ರಮವನ್ನ ಖಂಡಿಸಿ ಪಕ್ಷದ ಎಲ್ಲಾ ಸಂಸದರು ರಾಜೀನಾಮೆ ನೀಡಬೇಕು ಎಂದು ಸಂಸದ ರವನೀತ್ ಸಿಂಗ್ ಬಿಟ್ಟು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ರವನೀತ್ ಸಿಂಗ್ ಬಿಟ್ಟು ಅವರ ಸಲಹೆಗೆ ವಿರುದುನಗರ್ ಸಂಸದ ಮಾಣಿಕಂ ಠಾಗೋರ್ ಬೆಂಬಲ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡರು ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಪಕ್ಷದ 10ಕ್ಕೂ ಹೆಚ್ಚು ಸಂಸದರು ನಡೆಸಿದ ಅನೌಪಚಾರಿಕ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಈ ವಿಚಾರದ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಯುವ ಸಾರ್ದಯತೆ ಇಲ್ಲ ಎಂದು ತಿಳಿಸಿದ್ದಾರೆ.