ಚಾರ್ವಾಕಕ್ಕೆ ಸಚಿವೆ ಶೋಭಾ ಕೊಡುಗೆ ಏನು? : ಮಮತಾ ಗಟ್ಟಿ ಪ್ರಶ್ನೆ : ಆರ್ಲಪದವಿನಲ್ಲಿ ಕಾಂಗ್ರೆಸ್ ಜನಜಾಗೃತಿ ಸಭೆ

New Project (25)
Published on

ಪುತ್ತೂರು ಗ್ರಾಮಾಂತರ: ಸರ್ಕಾರದ ಪಂಚ ಗ್ಯಾರಂಟಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಇದರಿಂದಾಗಿ ಅಭಿವೃದ್ದಿ ಕೆಲಸ ನಡೆಯುತ್ತಿಲ್ಲ ಎಂದು ಹೇಳುವ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಮತ್ತು ಕೇಂದ್ರ ಸಚಿವೆಯಾಗಿ ಇಷ್ಟು ವರ್ಷಗಳ ಅವಧಿಯಲ್ಲಿ ಸ್ವಗ್ರಾಮ ಚಾರ್ವಾಕಕ್ಕೆ ಏನು ಕೊಡುಗೆ ನೀಡಿದ್ದಾರೆ? ಎಂಬುದನ್ನು ಬಹಿರಂಗಪಡಿಸಲಿ ಎಂದು ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸವಾಲು ಹಾಕಿದರು.

ಪಾಣಾಜೆ ಗ್ರಾಮದ ಆರ್ಲಪದವಿನಲ್ಲಿ ಮಂಗಳವಾರ ‘ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ’ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.

ಪುತ್ತೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ, ಉಸ್ತುವಾರಿ ಶಂಕರನಾರಾಯಣ ಭಟ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ಬ್ಲಾಕ್ ಕಾಂಗ್ರೆಸ್ ಎಸ್‌ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಬ್ಲಾಕ್ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಸುಪ್ರಿತ್ ಕಣ್ಣಾರಾಯ, ಪಾಣಾಜೆ ಗ್ರಾಪಂ ಅಧ್ಯಕ್ಷೆ ಮೈಮೂನತುಲ್ ಮೆಹ್ರಾ, ಗ್ಯಾರಂಟಿ ಸಮಿತಿಯ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಬ್ಲಾಕ್ ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜೆ, ಪಕ್ಷದ ಮುಖಂಡರಾದ ಶರೂನ್ ಸಿಕ್ವೆರಾ, ಸತೀಶ್ ರೈ ನಿಡ್ಪಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಭರಣ್ಯ ಸ್ವಾಗತಿಸಿದರು. ಅಬೂಬಕ್ಕರ್ ಆರ್ಲಪದವು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net