

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕಾಂಗ್ರೆಸ್ ಹೈಕಮಾಂಡ್ ಇದೀಗ ಅಧಿಕೃತವಾಗಿ ಘೋಷಣೆ ಮಾಡಿದೆ. ಅಲ್ಲದೆ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂಬುದನ್ನೂ ಅಧಿಕೃತವಾಗಿ ಘೋಷಿಸಲಾಗಿದೆ.
ನವದೆಹಲಿಯಲ್ಲಿ ಇದೀಗ ಸುದ್ದಿಗೋಷ್ಠಿ ಕರೆದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ವಿಷಯವನ್ನು ಘೋಷಣೆ ಮಾಡಿದ್ದಾರೆ. ಮಾತ್ರವಲ್ಲ, ಉಪ ಮುಖ್ಯಮಂತ್ರಿ ಎಷ್ಟು ಮಂದಿ ಎನ್ನುವುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಆಗಿರುತ್ತಾರೆ. ಅಲ್ಲದೆ ಅವರು ಲೋಕಸಭೆ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಮೇ 20ರಂದು ಸಿಎಂ- ಡಿಸಿಎಂ ಜತೆ ಸಚಿವರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಒಬ್ಬರು ಮಾತ್ರ ಉಪ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ವೇಣುಗೋಪಾಲ್ ಸ್ಪಷ್ಟವಾಗಿ ತಿಳಿಸಿದ್ದಾರೆ.