More

    ಮುಸ್ಲಿಂರನ್ನು ಕಾಂಗ್ರೆಸ್‌ ಕೇವಲ ವೋಟ್‌ ಬ್ಯಾಂಕ್‌ಗೆ ಬಳಸಿಕೊಂಡಿದೆ: ರಾಜನಾಥ್ ಸಿಂಗ್​

    ನವದೆಹಲಿ: ಚುನಾವಣಾ ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಒಡಕು ಮೂಡಿಸುವ ಮೂಲಕ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ನಾಡಾದಿಂದ ಕುಸ್ತಿಪಟು ಬಜರಂಗ್ ಪೂನಿಯಾ ಅಮಾನತು! ಕಾರಣ ಹೀಗಿದೆ..?

    ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಧಾರ್ಮಿಕ ನೆಲೆಯಲ್ಲಿ ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಹಾಗೂ ಸಾಮಾಜಿಕ ಸಾಮರಸ್ಯವನ್ನು ಕದಡಲು ಬಯಸುತ್ತದೆ. ಅವರು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್ತದೆ ಎಂದು ಆರೋಪ ಮಾಡಿದರು.

    ಕಾಂಗ್ರೆಸ್ ಭಯದ ಮನಸ್ಥಿತಿ ಸೃಷ್ಟಿಸಲು ಬಯಸುತ್ತದೆ. ಅವರು ಚುನಾವಣೆಗಾಗಿ ಹಿಂದೂ-ಮುಸ್ಲಿಂ ಕಾರ್ಡ್ ಬಳಸಲು ಬಯಸುತ್ತಾರೆ. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ವಿಭಜಿಸಿ ಸರ್ಕಾರ ರಚಿಸಲು ಬಯಸುತ್ತಾರೆ. ಕಾಂಗ್ರೆಸ್ ಅದನ್ನು ಯಾವಾಗಲೂ ಮಾಡಿಕೊಂಡು ಬಂದಿದೆ ಎಂದು ಅವರು ಹೇಳಿದ್ದಾರೆ.
    ಕಾಂಗ್ರೆಸ್ ಸರ್ಕಾರ ರಚನೆಗಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕೀಯದ ಗುರಿ ರಾಷ್ಟ್ರ ನಿರ್ಮಾಣಕ್ಕೆ ಇರಬೇಕು ಎಂದು ಸಲಹೆ ನೀಡಿದರು.

    ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವ ಪಕ್ಷದ ಯೋಜನೆಯು ದೇಶದಲ್ಲಿ ಆರ್ಥಿಕ ಹಿಂಜರಿತವನ್ನು ಉಂಟುಮಾಡುತ್ತದೆ. ಅರ್ಜೆಂಟೀನಾ ಮತ್ತು ವೆನೆಜುವೆಲಾ ಇದನ್ನು ಜಾರಿಗೆ ತಂದು ಹಾನಿಕಾರಕ ಪರಿಣಾಮಗಳನ್ನು ಎದುರಿಸಿತು. ಇದರಿಂದ ಹೂಡಿಕೆದಾರರು ಭಾರತದ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ” ಎಂದು ಸಿಂಗ್ ಹೇಳಿದರು.

    ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಬಿಜೆಪಿ 370 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು 400 ಸ್ಥಾನಗಳ ಗಡಿ ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಬಾರಿನಡೆಯುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ನಾವು ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ. ತಮಿಳುನಾಡಿನಲ್ಲಿ ಕೆಲವು ಸ್ಥಾನಗಳನ್ನು ಪಡೆಯುತ್ತೇವೆ, ಕೇರಳದಲ್ಲಿಯೂ ನಮ್ಮ ಖಾತೆ ತೆರೆಯುತ್ತದೆ, ನಾವು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

    ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸೇರಿದಂತೆ ಬಿಜೆಪಿಯ ಚುನಾವಣಾ ಭರವಸೆಗಳನ್ನು ಈಡೇರಿಸುವ ಕುರಿತು ಮಾತನಾಡಿದ ಕೇಂದ್ರ ರಕ್ಷಣಾ ಸಚಿವರು, ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.

    “ನಾವು ನಮ್ಮ ವಿಶ್ವಾಸಾರ್ಹತೆಯ ಮೇಲೆ ಯಾವುದೇ ಪ್ರಶ್ನಾರ್ಥಕ ಚಿಹ್ನೆಯನ್ನು ಎಂದಿಗೂ ಅನುಮತಿಸುವುದಿಲ್ಲ ಮತ್ತು ದೇಶದ ಏಕತೆ ಮತ್ತು ಸಮಗ್ರತೆಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಏನು ಹೇಳುತ್ತೇವೋ ಅದನ್ನು ನಾವು ಕಾರ್ಯಗತಗೊಳಿಸುತ್ತೇವೆ. ನಾವು ಏನು ಹೇಳುತ್ತೇವೋ ಅದನ್ನು ನಾವು ಮಾಡಬೇಕು” ಎಂದು ಸಿಂಗ್ ಹೇಳಿದರು.

    ಮಹಿಳಾ ಪ್ರಧಾನ ಸಿನಿಮಾದಲ್ಲಿ ‘ರಣವಿಕ್ರಮ’ ಹಾಟ್​ ಬೆಡಗಿ ಅನುಪಮಾ ಪರಮೇಶ್ವರನ್..! ನಾಳೆ ಫಸ್ಟ್ ಲುಕ್ ರಿಲೀಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts