More

    ಎಚ್.ಆರ್.ಶ್ರೀನಾಥ ನಿವಾಸಕ್ಕೆ ಪರಣ್ಣ ಭೇಟಿ

    ಗಂಗಾವತಿ: ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ನೇತೃತ್ವದ ತಂಡ ಶುಕ್ರವಾರ ಭೇಟಿ ನೀಡಿದ್ದು, ಬೆಂಬಲಿಸುವಂತೆ ಮನವಿ ಮಾಡಿದರು.


    ಕೆಎಲ್‌ಇ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ, ಕ್ಷೇತ್ರದ ಉಸ್ತುವಾರಿ ಅಜಯ್ ಮಹಾವರ್‌ರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಇದಕ್ಕೂ ಮುನ್ನ ಮಾಜಿ ಸಂಸದ ಎಚ್.ಜಿ.ರಾಮುಲುರೊಂದಿಗೆ ಮಾತುಕತೆ ನಡೆಸಿದ ಮುಖಂಡರು, ಪ್ರಸಕ್ತ ರಾಜಕೀಯ ವಿದ್ಯಾಮಾನ ಮತ್ತು ಅಭಿವೃದ್ಧಿ ಕುರಿತು ಚರ್ಚಿಸಿದರು. ಬಿಜೆಪಿ ಸೇರ್ಪಡೆ ಕುರಿತು ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ನಿರಾಕರಿಸಿದ್ದು, ಕೆಪಿಸಿಸಿ ಮುಖಂಡರೊಂದಿಗೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


    ಕಾಂಗ್ರೆಸ್ ಯುವ ಘಟಕದ ಪ್ರತಿನಿಧಿ ಎಚ್.ಎಸ್.ಭರತ್ ನೇತೃತ್ವದ ಯುವಕರಿಗೆ ಬಿಜೆಪಿಗೆ ಆಹ್ವಾನ ನೀಡಿತು. ಮುಖಂಡರಾದ ಎಸ್.ರಾಘವೇಂದ್ರ ಶ್ರೇಷ್ಠಿ, ಎಚ್.ಎಂ.ಸಿದ್ರಾಮಯ್ಯಸ್ವಾಮಿ, ಸಂತೋಷ ಕೆಲೋಜಿ, ಜೋಗದ ನಾರಾಯಣಪ್ಪ ನಾಯಕ, ಜೋಗದ ಹನುಮಂತಪ್ಪ ನಾಯಕ, ಅರ್ಜುನ ರಾಯ್ಕರ್, ಕಳಕನಗೌಡ ಕಲ್ಲೂರ್ ಇತರರಿದ್ದರು.

    ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ?

    ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಎಚ್.ಆರ್.ಶ್ರೀನಾಥರನ್ನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ದುಂಬಾಲು ಬಿದ್ದಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದರೂ, ವಲಸೆ ಬಂದವರಿಗೆ ಆದ್ಯತೆ ನೀಡಲಾಗುತ್ತಿದೆ. ಈ ಬಾರಿ ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ವಿರುದ್ಧ ಬೆಂಬಲಿಗರು ಕಿಡಿಕಾರಿದ್ದಾರೆ. ಈ ಬಗ್ಗೆ ಶ್ರೀನಾಥ ಮಾತನಾಡಿ, ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದ್ದು, ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಉಳಿದುಕೊಂಡು, ಜಿಲ್ಲೆಯ ಯಾವುದೇ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲ್ಲ. ಬಳ್ಳಾರಿ, ವಿಜಯನಗರ ಮತ್ತು ಕಲಬುರಗಿ ಕ್ಷೇತ್ರದ ಪ್ರಚಾರದಲ್ಲಿ ಪಾಲ್ಗೊಳ್ಳುವೆ. ಯಾವುದೇ ಕಾರಣಕ್ಕೂ ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲ್ಲ ಎಂದರು.

    ಕೋಟ್…

    ಎಐಸಿಸಿ ನಾಯಕ ರಾಹುಲ್ ಗಾಂಧಿ ಕಚೇರಿಯಿಂದ ಶುಕ್ರವಾರ ಮಧ್ಯಾಹ್ನ ಕರೆ ಬಂದಿದ್ದು, ಏ.16ರಂದು ಕೆಪಿಸಿಸಿ ಕಚೇರಿಗೆ ಬರಲು ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.

    ಎಚ್.ಆರ್.ಶ್ರೀನಾಥ ಮಾಜಿ ಎಂಎಲ್ಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts