More

    ಕಾಂಗ್ರೆಸ್​ನ ‘ನಾರಿ ನ್ಯಾಯ’ ಪ್ರಣಾಳಿಕೆ! ಮಹಿಳೆಯರಿಗೆ ಐದು ವಿಶಿಷ್ಟ ಗ್ಯಾರಂಟಿ ನೀಡಿದ ‘ಕೈ’

    ನವದೆಹಲಿ: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿವೆ. ಕಳೆದ 10 ವರ್ಷಗಳಿಂದ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಗೆಲ್ಲುವ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

    ಇದನ್ನೂ ಓದಿ: ಹಾರ್ದಿಕ್​​​ ಪಾಂಡ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಸ್ಟಾರ್​​ ಕ್ರಿಕೆಟರ್​: ಕಾರಣ ಹೀಗಿದೆ?

    ಕಾಂಗ್ರೆಸ್ ಪಕ್ಷ ಇಂದು (ಬುಧವಾರ) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ 5 ಘೋಷಣೆಗಳನ್ನು ಹೊರಡಿಸಲಾಗಿದೆ. ಅದರಲ್ಲೂ ಮಹಿಳೆಯನ್ನು ಗಮನದಲ್ಲಿಟ್ಟು ಈ ಯೋಜನೆಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ‘ನಾರಿ ನ್ಯಾಯ’ ಗ್ಯಾರಂಟಿ ಎಂದು ಹೆಸರಿಡಲಾಗಿದೆ. ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ನಾರಿ ನ್ಯಾಯ ಗ್ಯಾರಂಟಿ ಅಡಿಯಲ್ಲಿ ಕೈ ಐದು ಪ್ರಮುಖ ಯೋಜನೆಗಳನ್ನು ಘೋಷಿಸಿದೆ. ಮಹಾಲಕ್ಷ್ಮೀ, ಆದಿ ಆಬಾಧಿ ಪೂರಾ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ್ ಮೈತ್ರಿ, ಮತ್ತು ಸಾವಿತ್ರಿಬಾಯಿ ಫುಲೆ ಹಾಸ್ಟೆಲ್ ಇವು ಈ 5 ಯೋಜನೆಗಳು.

    1. ಆದಿ ಆಬಾಧಿ ಪೂರಾ ಹಕ್​: ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕುಗಳು ಸಿಗುತ್ತವೆ.

    2. ಶಕ್ತಿ ಕಾ ಸಮ್ಮಾನ್ : ಈ ಯೋಜನೆಯ ಮೂಲಕ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು.

    3. ಮಹಾಲಕ್ಷ್ಮೀ: ಇದರ ಅಡಿಯಲ್ಲಿ ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ನೀಡಲಾಗುತ್ತದೆ.

    4. ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್: ಉದ್ಯೋಗಿ ಮಹಿಳೆಯರಿಗಾಗಿ ಸುರಕ್ಷಿತ ಮತ್ತು ಕೈಗೆಟುಕುವ ವಸತಿ ಸೌಕರ್ಯಗಳನ್ನು ಒದಗಿಸುವುದು ಕಾಂಗ್ರೆಸ್​ ಪಕ್ಷದ ಗುರಿ ಹೊಂದಿದೆ. ಈ ಮೂಲಕ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕನಿಷ್ಠ ಒಂದು ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್ ಹಾಸ್ಟೆಲ್ ನಿರ್ಮಾಣಮಾಡಲಾಗುವುದು.

    5. ಅಧಿಕಾರ್‌ ಮೈತ್ರಿ: ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಪ್ಯಾರಾ-ಲೀಗಲ್ ಅಂದರೆ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿಯಾಗಿ ನೇಮಿಸುವ ಯೋಜನೆಯೇ ಅಧಿಕಾರ್‌ ಮೈತ್ರಿ.

    1926ರಿಂದ ಇಲ್ಲಿಯವರೆಗೆ ನಮ್ಮ ವಿರೋಧಿಗಳು ಹುಟ್ಟಿದಾಗಿನಿಂದ ನಾವು ಪ್ರಣಾಳಿಕೆಗಳನ್ನು ತಯಾರಿಸುತ್ತಿದ್ದೇವೆ ಮತ್ತು ಆ ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ. ನೀವೆಲ್ಲರೂ ಕಾಂಗ್ರೆಸ್‌ಗೆ ನಿಮ್ಮ ಆಶೀರ್ವಾದವನ್ನು ನೀಡುತ್ತಲೇ ಇರುತ್ತೀರಿ ಎಂಬ ನಂಬಿಕೆ ಇದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಈ ಹೋರಾಟದಲ್ಲಿ ನಮ್ಮ ಕೈಗಳನ್ನು ಬಲಪಡಿಸುತ್ತೀರಿ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts