Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಚಾಮುಂಡೇಶ್ವರಿ ದರ್ಶನ ಪಡೆದ ರಾಹುಲ್​ ಗಾಂಧಿ

Saturday, 24.03.2018, 10:11 AM       No Comments

ಮೈಸೂರು: ಎರಡು ದಿನಗಳ ಹಳೆ ಮೈಸೂರು ಪ್ರವಾಸಕ್ಕಾಗಿ ಸಾಂಸ್ಕೃತಿಕ ನಗರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಇಂದು ಬೆಳಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್​ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಅಲ್ಲಿ ಅವರನ್ನು ವೀರಗಾಸೆ, ಡೊಳ್ಳು ಕುಣಿತ ಕಲಾತಂಡಗಳ ನಾದದೊಂದಿಗೆ ಸ್ವಾಗತ ಕೋರಲಾಯಿತು. ನಂತರ ದೇಗುಲಕ್ಕೆ ತೆರಳಿದ ರಾಹುಲ್​ ಚಾಮುಂಡೇಶ್ವರಿ ದರ್ಶನ ಪಡೆಯುವ ಮೂಲಕ ನಾಲ್ಕನೇ ಹಂತದ ಜನಾಶೀರ್ವಾದ ಯಾತ್ರೆಗೆ ಚಾಲನೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್​ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರು ಸಾಥ್​ ನೀಡಿದರು.

ದೇವಿಯ ದರ್ಶನ ಪಡೆದ ನಂತರ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದರು.

Leave a Reply

Your email address will not be published. Required fields are marked *

Back To Top