More

    ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕರ್ತರ ಶಕ್ತಿ ಕುಗ್ಗಿಸುವ ಕೆಲಸ

    ಸೋಮವಾರಪೇಟೆ: ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಮೊಕದ್ದಮೆ ದಾಖಲಿಸುವ ಮೂಲಕ ಬಿಜೆಪಿ ಕಾರ್ಯಕರ್ತರ ಶಕ್ತಿ ಕುಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಪದಾಧಿಕಾರಿಗಳು ಆರೋಪಿಸಿದ್ದಾರೆ.

    ಕಾಂಗ್ರೆಸ್ ಧಮನಕಾರಿ ನೀತಿಗೆ ಬಿಜೆಪಿ ಕಾರ್ಯಕರ್ತರು ಮಣಿಯುವುದಿಲ್ಲ ಎಂದು ಮಂಡಲ ವಕ್ತಾರ ಕಂಠಿಕಾರ್ಯಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

    ಲೋಕಸಭಾ ಚುನಾವಣೆಯ ಮತದಾನದ ದಿನದಂದು ಶನಿವಾರಸಂತೆ ಬೈಪಾಸ್ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮತ್ತು ಬಿಜೆಪಿ ಬೆಂಬಲಿಗ ಮಹಿಳೆಯೊಬ್ಬರ ಮಧ್ಯೆ ಜಗಳ ನಡೆಯುತ್ತಿದ್ದಾಗ ಮಾಧ್ಯಮ ಪ್ರತಿನಿಧಿಯೊಬ್ಬರು ಗಲಾಟೆ ದೃಶ್ಯವನ್ನು ಸೆರೆ ಹಿಡಿಯುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕ್ಯಾಮರಾ ಕಿತ್ತುಕೊಂಡು, ಕೊಲೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿ ನೀಡಿದ ದೂರನ್ನು ವಿಳಂಬವಾಗಿ ಸ್ವೀಕರಿಸಿ ಮೊಕದ್ದಮೆ ದಾಖಲಿಸಲಾಗಿದೆ.

    ಆದರೆ ಸ್ಥಳೀಯ ಶಾಸಕರ ಒತ್ತಡದಿಂದ ದೂರು ಕೊಟ್ಟವರ ವಿರುದ್ಧವೇ ಕೊಲೆಯತ್ನ ಪ್ರಕರಣ ಶನಿವಾರಸಂತೆ ಠಾಣೆಯಲ್ಲಿ ದಾಖಲಾಗಿದೆ. ಸ್ಥಳೀಯ ಶಾಸಕರು ಅವರ ಪಕ್ಷಕ್ಕೆ ಮಾತ್ರ ಶಾಸಕರಲ್ಲ. ಮಡಿಕೇರಿ ಕ್ಷೇತ್ರದ ಜನರಿಗೆ ಶಾಸಕರು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕಾರ್ಯಕರ್ತರು ಹೇಳಿದ್ದೆಲ್ಲವೂ ಸತ್ಯ ಎಂದು ತಿಳಿದು ಬಿಜೆಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಸಲ್ಲದು ಎಂದರು.

    ಕೂಡಲೇ ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ಕೈಬಿಡಬೇಕು. ತಪ್ಪಿದಲ್ಲಿ ಜಿಲ್ಲಾ ಮಟ್ಟದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎಂ.ಸಿ.ಗೌತಮ್ ಎಚ್ಚರಿಸಿದರು.

    ಇತ್ತೀಚಿನ ದಿನಗಳಲ್ಲಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಶಾಸಕರಂತೆ ವರ್ತಿಸುತ್ತಿದ್ದಾರೆ. ಕಚೇರಿಗಳಲ್ಲಿ ಅಧಿಕಾರಿಗಳನ್ನೇ ಬೆದರಿಸುತ್ತಾರೆ ಎಂಬ ದೂರು ಕೇಳಿಬರುತ್ತಿದೆ. ಕಾರ್ಯಕರ್ತರ ಕಾಟದಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರೇ ಬರುತ್ತಿಲ್ಲ. ಈ ಹಿಂದಿನ ಶಾಸಕರು ಇದ್ದಾಗ 10 ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಮೂರ‌್ನಾಲ್ಕು ವೈದ್ಯರು ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಸೋಮೇಶ್ ಹೇಳಿದರು.
    ಗೋಷ್ಠಿಯಲ್ಲಿ ಪದಾಧಿಕಾರಿಗಳಾದ ದರ್ಶನ್ ಜೋಯಪ್ಪ, ಕೃಷ್ಣಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts