More

    ರಾಹುಲ್ ಗಾಂಧಿ ಪೋಸ್ಟರ್ ವಿವಾದ; ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!

    ಕೇರಳ: ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಮುಖವನ್ನು ‘ನವಯುಗದ ರಾವಣ’ ಎಂದು ಬಿಂಬಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದು, ರಸ್ತೆಯ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.

    ಇದನ್ನೂ ಓದಿ: ಹೊಸದೂ ಬೇಡ, ಹಳೇದೂ ಬೇಡ; ಏನಿದು ಮಹಿಳೆಯರ ಒತ್ತಾಯ?; ಮಾನಿನಿಯರು ಒಲಿಯದ ಏಕೈಕ ಭಾಗ್ಯ!

    ತಿರುವನಂತಪುರಂನಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು, ಹುತಾತ್ಮರ ಚೌಕದಿಂದ ಬಿಜೆಪಿ ರಾಜ್ಯ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಕಾರ್ಯಕರ್ತರನ್ನು ಬ್ಯಾರಿಕೇಡ್‌ ಬಳಸಿ ಪೊಲೀಸರು ತಡೆದಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮೂರು ಸುತ್ತಿನ ಜಲಫಿರಂಗಿಗಳನ್ನು ಬಳಸಿದ್ದಾರೆ. “ಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಗಳು ರಾಹುಲ್ ಗಾಂಧಿಗೆ ಹೆದರುತ್ತಿದ್ದು, ಇದರಿಂದಾಗಿ ರಾಹುಲ್ ಅವರನ್ನು ರಾವಣನಂತೆ ಬಿಂಬಿಸಿ ಅವರ ಮೇಲೆ ದಾಳಿಗೆ ಕರೆ ನೀಡಿದ್ದಾರೆ” ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ. ಸುಧಾಕರನ್ ಹೇಳಿದ್ದಾರೆ.

    ಇದನ್ನೂ ಓದಿ:  ಸದೃಢ ರಾಷ್ಟ್ರಕ್ಕಾಗಿ ಬಿಜೆಪಿಯ ಹೋರಾಟ ಎಂದಿಗೂ ನಿಲ್ಲುವುದಿಲ್ಲ: ಜೆ.ಪಿ. ನಡ್ಡಾ

    ”ರಾಷ್ಟ್ರಮಟ್ಟದಲ್ಲಿ ನರೇಂದ್ರ ಮೋದಿಯವರ ತಾರಾ ಮೌಲ್ಯ ಕುಸಿದು ಬಿಜೆಪಿಯ ಪ್ರಸ್ತುತತೆ ಮರೆಯಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಪಾಳಯ ರಾಹುಲ್ ಗಾಂಧಿ ವಿರುದ್ಧ ಪ್ರಚಾರ ಆರಂಭಿಸಿದ್ದು, ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮುಖೇನ ಅವರ ಜೀವಕ್ಕೆ ಅಪಾಯವನ್ನುಂಟು ಮಾಡುವ ಕರೆಯನ್ನು ಬಿಜೆಪಿ ಕೊಟ್ಟಿದೆ” ಎಂದು ಸುಧಾಕರನ್ ಹೇಳಿದ್ದಾರೆ.

    ಇದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ದೇಶದ ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ಅವಕಾಶ ನೀಡುವುದಿಲ್ಲ. ಬಿಜೆಪಿಯ ಹಿಂಸಾಚಾರದ ಕರೆ ವಿರುದ್ಧ ದೇಶದ ಜಾತ್ಯತೀತ ಪ್ರಜಾಪ್ರಭುತ್ವವಾದಿಗಳು ಪ್ರತಿಭಟಿಸಬೇಕೆಂದು ಸುಧಾಕರನ್ ಒತ್ತಾಯಿಸಿದರು,(ಏಜೆನ್ಸೀಸ್).

    ಆರೋಗ್ಯಕ್ಕೆ ಬೆಂಡೆಕಾಯಿ ಎಷ್ಟು ಪ್ರಯೋಜನಕಾರಿ?; ಇಲ್ಲಿದೆ ಉಪಯುಕ್ತ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts