More

    ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

    ಚಿಕ್ಕಮಗಳೂರು: ಅತ್ಯಾಚಾರಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಮಂಗಳವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ತಾಲೂಕು ಕಚೇರಿಯಿಂದ ಮೆರವಣಿಗೆ ನಡೆಸಿದ ಮಹಿಳಾ ಕಾರ್ಯಕರ್ತೆಯರು ಹಾಗೂ ಮುಖಂಡರುಗಳು ಸಂಸದ ಪ್ರಜ್ವಲ್ ಹಾಗೂ ಹೊಳೇನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ದಿಕ್ಕಾರ ಕೂಗಿದರಲ್ಲದೆ ಪ್ರಜ್ವಲ್‌ನಿಂದ ಮಹಿಳೆಯರಿಗೆ ರಕ್ಷಣೆ ಒದಗಿಸಿಕೊಡಬೇಕು ಆಗ್ರಹಿಸಿದರು.
    ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ, ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ಪೂಜನೀಯ ಸ್ಥಾನವಿದೆ. ಅದರಲ್ಲೂ ಜೆಡಿಎಸ್‌ನಲ್ಲಿ ತೆನೆಹೊತ್ತ ಮಹಿಳೆಯ ಗುರುತಿಗೆ ವಿರುದ್ಧವಾಗಿ ಸಂಸದರು ಹಾಗೂ ಶಾಸಕರು ನಡೆದುಕೊಳ್ಳುತ್ತಿರುವುದು ನಾಚಿಕೇಡಿನ ಸಂಗತಿ ಎಂದು ಕಿಡಿ ಕಾರಿದರು.
    ಅಪ್ಪ-ಮಗ ಈರ್ವರು ಮನೆಯ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸದ್ದನ್ನು ನೊಂದ ಮಹಿಳೆ ಪ್ರಕರಣ ದಾಖಲಿಸುವ ಮೂಲಕ ಸಾರ್ವಜನಿಕರೆದುರು ಪ್ರಜ್ವಲ್ ಹಾಗೂ ರೇವಣ್ಣ ಹೀನ ಕೃತ್ಯವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಈ ಹಿಂದಿನ ಮಹಿಳೆಯರ ಮೇಲೆ ದೌರ್ಜನ್ಯವನ್ನು ಮುಕ್ತವಾಗಿ ಹೇಳುವ ಮೂಲಕ ರಕ್ಷಣೆ ಒದಗಿಸಲು ಹೋರಾಟ ಮಾಡುತ್ತಿದ್ದಾರೆ ಎಂದರು.
    ಕಾಮದಾಸೆಗಾಗಿ ಮನೆಕೆಲಸದ ಕೂಲಿಕಾರ್ಮಿಕರು, ರಾಜಕೀಯ ಹಾಗೂ ಸರ್ಕಾರಿ ವೃತ್ತಿಯಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು ಬಳಸಿಕೊಂಡಿರುವುದು ನಾಡಿನ ದೊಡ್ಡ ದುರಂತ. ಶೋಷಣೆಗೆ ಒಳಗಾಗಿರುವ ಮಹಿಳೆಯರನ್ನು ರಕ್ಷಿಸುವ ಸಲುವಾಗಿ ರಾಜ್ಯದ ಮಹಿಳೆಯರು ಒಗ್ಗಟ್ಟಾಗಿ ಕೈ ಜೋಡಿಸಿ ಕಾಮುಕರನ್ನು ಮಟ್ಟ ಹಾಕಲು ಪ್ರಕರಣ ದಾಖಲಿಸಬೇಕು ಎಂದರು.
    ನಾಡಿನ ಅಗ್ರಗಣ್ಯ ವ್ಯಕ್ತಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ದಂತಾಗಿದೆ. ಇನ್ನೊಂದೆಡೆ ಎಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಹಣದಿಂದ ಸ್ವಾಭಿಮಾನದ ಜೀವನ ನಡೆಸುತ್ತಿರುವ ಮಹಿಳೆಯರನ್ನು ಸಹಿಸಿಕೊಳ್ಳಲಾರದೇ ಮಹಿಳೆಯರಿಗೆ ಹಾದಿ ತಪ್ಪುತ್ತಿದ್ದಾರೆ ಎನ್ನುತ್ತಿದ್ದಾರೆ. ಆದರೆ ನೈತಿಕವಾಗಿ ಹಾದಿ ತಪ್ಪುವ ಕೆಲಸವನ್ನು ಅವರ ಕುಟುಂಬದವರೇ ಮಾಡುತ್ತಿದ್ದಾರೆ ಎಂದು ದೂರಿದರು.
    ಕೂಡಲೇ ಜೆಡಿಎಸ್ ಪಕ್ಷದ ವರಿಷ್ಟರು ತೆನೆಹೊತ್ತ ಮಹಿಳೆಯ ಗುರುತನ್ನು ತೆಗೆದುಹಾಕಬೇಕು. ಇಂಥ ಪ್ರಕರಣದಿಂದ ನಾಡಿನ ಆರೂವರೆ ಕೋಟಿ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಪ್ರಜ್ವಲ್ ಕುಟುಂಬದ ಸದಸ್ಯರು ನೈತಿಕ ಹೊಣೆಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ ಮಹಿಳೆಯರಿಗೆ ಗೌರವ ಸೂಚಿಸಬೇಕು ಎಂದು ಒತ್ತಾಯಿಸಿದರು.
    ವಿಧಾನ ಪರಿಷತ್ ಮಾಜಿ ಸದಸ್ಯ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ, ಸಂಸದ ಪ್ರಜ್ವಲ್‌ರ ಹಿಂದೆ ವಿಕೃತಕಾಮಿ ಹಾಗೂ ಗೋಮುಖವ್ಯಾಘ್ರ ಮುಖವಾಡವಿದೆ. ಮನೆಕೆಲಸಕ್ಕೆಂದು ತೆರಳುವ ಬಡ ಹಾಗೂ ಹಿಂದುಳಿದ ವರ್ಗದ ಮಹಿಳೆಯರನ್ನು ಕಾಮದಾಸೆಗಾಗಿ ಬಳಸಿಕೊಂಡಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂಥ ಪ್ರಕರಣವಾಗಿದೆ ಎಂದು ಹೇಳಿದರು.
    ವಯಸ್ಸಿನ ಅಂತರವನ್ನು ಗಮನಿಸದೇ ಹಾಲಿ ಸಂಸದರು ಮಹಿಳೆಯರನ್ನು ಬಳಸಿಕೊಂಡು ವಿಕೃತ ರೀತಿಯಲ್ಲಿ ಮರೆದಿರುವುದು ವಿಪರ್ಯಾಸ. ಅಲ್ಲದೇ ತಮ್ಮ ವೀಡಿಯೋವನ್ನು ತಾನೇ ಚಿತ್ರಿಸಿಕೊಂಡಿರುವುದನ್ನು ಗಮನಿಸಿದರೆ ಇಂಥ ಕಾಮುಕ ಸಂಸದರಾಗಿ ಕರ್ತವ್ಯ ನಿರ್ವಹಿಸಲು ನಾಲಾಯಕ್ ಎನಿಸುತ್ತದೆ ಎಂದರು.
    ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಬಾನ ಸುಲ್ತಾನ ಮಾತನಾಡಿ, ನಾಡಿನ ಹೆಣ್ಣು ಮಕ್ಕಳನ್ನು ಗೌರವಿಸುವ ಗುಣ ಇಲ್ಲದಿರುವ ಸಂಸದರು ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಸಾಧ್ಯವಿಲ್ಲ. ಇಂಥ ನೀಚ ಹಾಗೂ ಅನಾಗರೀಕತೆಯ ವ್ಯಕ್ತಿತ್ವ ಹೊಂದಿರುವ ಪ್ರಜ್ವಲ್ ಅವರನ್ನು ಯಾವ ದೇಶದಲ್ಲಿ ಅಡಗಿದ್ದಾರೆಂದು ಮಾಹಿತಿ ತಿಳಿದು ಅಲ್ಲಿಂದಲೇ ಬಂಧಿಸಿ ಕಠಿಣ ಶಿಕ್ಷೆ ಗುರಿಪಡಿಸಬೇಕು ಎಂದರು.
    ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ನಿಡಘಟ್ಟ ಉಪಾಧ್ಯಕ್ಷೆ ಹೇಮಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶೀಲಾ, ನಗರಾಧ್ಯಕ್ಷೆ ಇಂದಿರಾ ಶಂಕರ್, ಮುಖಂಡರಾದ ಯಶೋಧ, ಮಲ್ಲಿಕಾ ದೇವಿ, ನೇತ್ರಾವತಿ, ಶೋಭಾ, ರೇವತಿ,ಸವಿತಾ, ತನೋಜ್, ಸುದೀಪ್, ನೂರ್‌ಅಹ್ಮದ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts