More

    ರಾಜಸ್ಥಾನ ಚುನಾವಣೆ; ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

    ಜೈಪುರ: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಕಾಂಗ್ರೆಸ್​ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

    ರಾಜಸ್ಥಾನದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ, ಪ್ರತಿ ಪಂಚಾಯತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡಲಾಗುವುದೆಂದು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.

    ಪ್ರಣಾಳಿಕೆ ಬಿಡುಗಡೆ ಮಾಡಿದ ಮಾತನಾಡಿದ ಮುಖ್ಯುಮಂತ್ರಿ ಅಶೋಕ್​ ಗೆಹ್ಲೋಟ್, ರಾಜ್ಯ ಸರ್ಕಾರದ ವತಿಯಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಪ್ರತ್ಯೇಕ ಕಾನೂನನ್ನು ಜಾರಿ ಮಾಡಲಾಗುವುದು. ನಮ್ಮ ಅಧಿಕಾರದ ಅವಧಿಯಲ್ಲಿ ಜಾರತಿಗೆ ತರಲಾದ ಯೋಜನೆಗಳು ಹಾಗೂ ಕಾನೂನುಗಳು ಜನರ ಮೇಲೆ ಪ್ರಭಾವ ಬೀರಿದ್ದು, ಮತ್ತೊಮ್ಮೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ; ಮೊಹಮ್ಮದ್​ ಶಮಿಗೆ ಬಂಪರ್ ಗಿಫ್ಟ್​ ಘೋಷಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

    ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನಾವು ಘೋಷಿಸಿರುವ ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು. ನಾವು ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಅದೇ ರೀತಿ ಈ ಬಾರಿಯೂ ಸಹ ನಾವು ನುಡಿದಂತೆ ನಡೆಯುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಆಶ್ವಾಸನೆ ನೀಡಿದ್ದಾರೆ.

    ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು

    • ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸಿನಂತೆ ರೈತರಿಗೆ ಎಂಎಸ್‌ಪಿ ಕಾನೂನು ತರಲಾಗುವುದು.
    • ಚಿರಂಜೀವಿ ವಿಮೆ ಮೊತ್ತವನ್ನು 25 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲಾಗುವುದು.

    ನಾಲ್ಕು ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. 10 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗುವುದು.

    ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಉದ್ಯೋಗಗಳ ಹೊಸ ಕೇಡರ್ ಅನ್ನು ರಚಿಸಲಾಗುವುದು.

    ಸದ್ಯ 500 ರೂ.ಗೆ ಸಿಗುವ ಗ್ಯಾಸ್ ಸಿಲಿಂಡರ್ ಬೆಲೆ 400 ರೂ.

    ರಾಜ್ಯದಲ್ಲಿ ಆರ್‌ಟಿಇ ಕಾನೂನು ತರುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು.

    MNREGA ಮತ್ತು ಇಂದಿರಾ ಗಾಂಧಿ ನಗರ ಉದ್ಯೋಗವನ್ನು 125 ರಿಂದ 150 ದಿನಗಳಿಗೆ ಹೆಚ್ಚಿಸಲಾಗುವುದು.

    ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿಕಾರರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡಲು ಮರ್ಚೆಂಟ್ ಕ್ರೆಡಿಟ್ ಕಾರ್ಡ್ ಯೋಜನೆ ಆರಂಭಿಸಲಾಗುವುದು.

    ಸರ್ಕಾರಿ ನೌಕರರಿಗೆ ನಾಲ್ಕನೇ ವೇತನ ಶ್ರೇಣಿಯನ್ನು 9,18,27 ಮತ್ತು ಅಧಿಕಾರಿಗಳಿಗೆ ಅಪೆಕ್ಸ್ ಸ್ಕೇಲ್ ನೀಡಲಾಗುವುದು.

    100 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಗಳು ಮತ್ತು ಕುಗ್ರಾಮಗಳು ರಸ್ತೆಯ ಮೂಲಕ ಸಂಪರ್ಕಗೊಳ್ಳುತ್ತವೆ.

    ಪ್ರತಿ ಗ್ರಾಮ ಮತ್ತು ನಗರ ವಾರ್ಡ್‌ಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

    ವಸತಿ ಹಕ್ಕು ಕಾಯಿದೆ ತರುವ ಮೂಲಕ ಎಲ್ಲರಿಗೂ ವಸತಿ ನೀಡಲಾಗುವುದು ಮತ್ತು ಈಗಾಗಲೇ ಜಾರಿಯಲ್ಲಿರುವ ಯೋಜನೆಗಳನ್ನು ಮತ್ತಷ್ಟು ಬಲಪಡಿಸಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts