More

    ಉರಿಗೌಡ-ನಂಜೇಗೌಡರ ಆಧಾರ್‌ ಬಿಡುಗಡೆ; ತಾಯಿ ಅಶ್ವಥ್‌ ನಾರಾಯಣ್‌, ತಂದೆ ಸಿ.ಟಿ.ರವಿ!

    ಬೆಂಗಳೂರು: ಉರಿಗೌಡ, ನಂಜೇಗೌಡರ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್​​, ಜೆಡಿಸ್ ಪಕ್ಷಗಳು ನಡುವೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗ ಕಾಂಗ್ರೆಸ್​​ ಒಂದು ಹೆಜ್ಜೆ ಮುಂದೆ ಹೋಗಿ ಉರಿಗೌಡ ಹಾಗೂ ನಂಜೇಗೌಡರ ಹೆಸರಿನಲ್ಲಿ ಆಧಾರ್​ ಕಾರ್ಡ್​​ ಬಿಡುಗಡೆ ಮಾಡಿದೆ. ಕಾಂಗ್ರೆಸ್ಸಿಗರು ಆಧಾರ್‌ ಕಾರ್ಡ್‌ನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

    ಉರಿಗೌಡ ಮತ್ತು ನಂಜೇಗೌಡರಿಗೆ ಅಶ್ವಥ್‌ ನಾರಾಯಣ್‌ ತಾಯಿ ಹಾಗೂ ಸಿ.ಟಿ.ರವಿ ತಂದೆ. ಇವರಿಬ್ಬರೂ ಹುಟ್ಟಿದ್ದು ಚುನಾವಣೆ ಹತ್ತಿರ ಬಂದಾಗ. ಇವರ ಜನ್ಮಸ್ಥಳ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ. ಆಧಾರ್ ಸಂಖ್ಯೆ: 420 420 420 420 ಆಗಿದೆ. ಅನೇಕ ಸಂಶೋಧನೆ ಬಳಿಕ ಉರಿಗೌಡ ನಂಜೇಗೌಡರ ಆಧಾರ್ ಕಾರ್ಡ್ ಸಿಕ್ಕಿದೆ ಎಂದು ಬಿಜೆಪಿಗೆ ಕಾಂಗ್ರೆಸ್‌ ಟಾಂಗ್‌ ಕೊಟ್ಟಿದೆ.

    ಇದನ್ನೂ ಓದಿ: ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ..!

    ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು ಟೀಂ ನಿಂದ ಆಧಾರ್ ಕಾರ್ಡ್ ಬಿಡುಗಡೆ ಮಾಡಿದೆ. ಈ ಆಧಾರ್​​ ಕಾರ್ಡ್​​ಗಳು ಸೋಶಿಯಲಗ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿವೆ.

    ಇದನ್ನೂ ಓದಿ: VIDEO | ನ್ಯೂಸ್‌ ಓದುತ್ತಲೇ ದಿಢೀರ್‌ ಕುಸಿದು ಬಿದ್ದ ನಿರೂಪಕಿ..!
    ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಉರಿಗೌಡ-ನಂಜೇಗೌಡ ಹೆಸರು ರಾಜಕೀಯವಾಗಿ ಮುನ್ನೆಲೆಗೆ ಬಂದಿದೆ. ಟಿಪ್ಪು ಸುಲ್ತಾನ್‌ ಕೊಂದ ವೀರರಿವರು ಎಂದು ಬಿಜೆಪಿ ಬಿಂಬಿಸುತ್ತಿದೆ ಎಂದು ವಿರೋಧ ಪಕ್ಷಗಳು ಕಿಡಿಕಾರುತ್ತಿವೆ.

    BJP ಇರುವವರೆಗೂ ಬಡವರು,ರೈತರು ಜೀವನ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ; ಉಮಾಶ್ರೀ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts