More

    ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಬಿಡಲಿ

    ಬೆಳಗಾವಿ: ಸಿಡಿ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್‌ನವರು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಚಾರಿತ್ರ್ಯವಧೆ ಮಾಡುವ ಚಿಲ್ಲರೆ ರಾಜಕಾರಣ ನಿಲ್ಲಿಸಬೇಕು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮಾನವೀಯತೆಯಿಂದ ನಡೆದುಕೊಳ್ಳಬೇಕು. ವಿಚಾರಣೆ ಮತ್ತು ತನಿಖೆ ಪ್ರಕ್ರಿಯೆಗಳು ವರ್ಷಗಟ್ಟಲೆ ನಡೆಯುವುದನ್ನು ನೋಡಿದ್ದೇವೆ. 15 ದಿನಗಳಲ್ಲಿ ಎಲ್ಲವೂ ಮುಗಿದು ಹೋಗಬೇಕು ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಯಸಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಉಪ ಚುನಾವಣೆ ಎದುರಿಸಿ ಗೆದ್ದು ತೋರಿಸಲಿ. ಅದನ್ನು ಬಿಟ್ಟು ವೈಯಕ್ತಿಕ ಸಂಬಂಧಗಳ ಬಗ್ಗೆ ಕೆದಕಿ ಚಾರಿತ್ರ್ಯವಧೆ ಮಾಡುವುದು ಸರಿ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಎಸ್‌ಐಟಿ ತನಿಖೆ ಪೂರ್ಣಗೊಳಿಸಿದ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ.

    ಅಲ್ಲಿಯವರೆಗೂ ಕಾಯದೆ ಇರುವುದರಿಂದ, ಕಾಂಗ್ರೆಸ್ ನಾಯಕರ ಬಗ್ಗೆಯೇ ವಿಚಾರ ಮಾಡಬೇಕಾಗುತ್ತದೆ. ಅವರ ವರ್ತನೆ ಬಗ್ಗೆ ಸಂಶಯ ಮೂಡುತ್ತದೆ. ಕಾಂಗ್ರೆಸ್‌ನವರು ಮಾತ್ರ ಸಾಚಾ, ಉಳಿದವರು ಅಲ್ಲವೇ? ತನಿಖೆ ಮುಗಿಯುವವರೆಗೂ ಕಾಯಲಿ ಎಂದರು. ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಕಳೆದ ವಾರ ಮಾತನಾಡಿದ್ದೇನೆ. ಎಸ್‌ಐಟಿ ಪ್ರಕರಣದ ವಿಚಾರಣೆ ಇರುವುದರಿಂದ ರಮೇಶ ಪ್ರಚಾರಕ್ಕೆ ಬಂದಿಲ್ಲ. ಆದರೆ, ಪಕ್ಷದ ಅಭ್ಯರ್ಥಿ ಗೆಲ್ಲಿಸುವಂತೆ ಬೆಂಬಲಿಗರಿಗೆ ಸೂಚಿಸಿದ್ದಾರೆ. ಪ್ರಚಾರಕ್ಕೆ ಇನ್ನೂ ಅವಕಾಶವಿದ್ದು, ಬರಬಹುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts