ತಮ್ಮ ಮುಖ ತೋರಿಸಿದರೆ ಮತ ಬರುವುದಿಲ್ಲವೆಂದು ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ: ಕಾಂಗ್ರೆಸ್​​ ವ್ಯಂಗ್ಯ

Congress
Published on

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್‌ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಸುದೀಪ್‌ ಘೋಷಣೆಗೆ ರಾಜ್ಯ ಕಾಂಗ್ರೆಸ್ ‌ವ್ಯಂಗ್ಯವಾಡಿದೆ.

ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ. ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ ಮುಖ್ಯ ಮಂತ್ರಿ ಬಿಎಸ್​​ವೈ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಬಿಜೆಪಿ ನಡೆಗೆ ಕಾಂಗ್ರೆಸ್ ವ್ಯಂಗ್ಯವಾಡಿ ಟ್ವೀಟ್​​ ಮಾಡಿದೆ.

ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಅಂತಾನೂ ಹೇಳಲಿಲ್ಲ. ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದಷ್ಟೇ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net