ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ರಾ..?

Sonia vvani
Published on

ನವದೆಹಲಿ: ಸೋನಿಯಾ ಗಾಂಧಿಯವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ಎಲ್ಲ ಮುಖಂಡರಿಗೂ ಪತ್ರ ಬರೆದು, ಬೇರೆ ಅಧ್ಯಕ್ಷನನ್ನು ಆಯ್ಕೆ ಮಾಡುವಂತೆ ಹೇಳಿದ್ದಾರೆ ಎಂದು ಸುದ್ದಿಯಾಗಿತ್ತು. ನಾಳೆಯಿಂದ ಅವರು ಅಧ್ಯಕ್ಷರಾಗಿ ಇರುವುದಿಲ್ಲ ಎನ್ನಲಾಗಿತ್ತು.

ಹಾಗೇ, ಹಲವು ಮುಖಂಡರು ಕಾಂಗ್ರೆಸ್ ಅಧ್ಯಕ್ಷನ ಸ್ಥಾನವನ್ನು ಮತ್ತೆ ರಾಹುಲ್​ ಗಾಂಧಿಯವರೇ ವಹಿಸಿಕೊಳ್ಳಲಿ ಎಂದು ಒತ್ತಾಯಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಆದರೆ ಇದೆಲ್ಲ ಸುಳ್ಳು. ಸೋನಿಯಾ ಗಾಂಧಿಯವರು ರಾಜೀನಾಮೆ ನೀಡುತ್ತಿಲ್ಲ. ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಯುತ್ತಿಲ್ಲ ಎಂದು ಕಾಂಗ್ರೆಸ್​ ವಕ್ತಾರ ರಣದೀಪ್​ ಸಿಂಗ್​ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net