More

    ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ್ದೇ ಅನುಮಾನ : ಮಾಜಿ ಸಿಎಂ ಮೊಯ್ಲಿ ಆಕ್ರೋಶ

    ಚಿಕ್ಕಬಳ್ಳಾಪುರ: ಗುಜರಾತ್‍ನ ಹತ್ಯಾಕಾಂಡದ ವೇಳೆ ಅಂದಿನ ಮುಖ್ಯಮಂತ್ರಿ ಆಗಿದ್ದ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ಮೋದಿ ಅವರಿಂದ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ.? ಮೋದಿಯಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇನ್ನೂ ಓದಿ:ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಸಿಗಲಿ: ಎಲಾನ್ ಮಸ್ಕ್ ಕಿವಿಮಾತು

    ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ್ದೇ ಅನುಮಾನ : ಮಾಜಿ ಸಿಎಂ ಮೊಯ್ಲಿ ಆಕ್ರೋಶ

    ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದ್ದೇ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿ ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ವಾಗ್ದಾಳಿ ನಡೆಸಿದರು.

    ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ‌ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

    ನಿಜವಾದ ಬ್ರಾಹ್ಮಣರು, ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಅಂತ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದ್ದಾರೆ.

    ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.

    ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಅಮೃತ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ. ರಾಮ ಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ 11 ದಿನಗಳ ಕಠಿಣ ಉಪವಾಸ ವೃತ ಅಂತ್ಯಗೊಳಿಸಿದ್ದಾರೆ. ಸ್ವಾಮೀಜಿಗಳು ಪ್ರಧಾನಿ ಮೋದಿಗೆ ಶ್ರೀರಾಮನ ಪ್ರಸಾದ ನೀಡಿ ಕಠಿಣ ವೃತ ಪೂರ್ಣಗೊಳಿಸಿದ್ದಾರೆ.

    ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಹನುಮಂತ ಪಾತ್ರಧಾರಿ ಮೃತ್ಯು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts