More

    ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ

    ಹಿರೇಬಾಗೇವಾಡಿ: ಕೇಂದ್ರ ಸರ್ಕಾರದ ಭೂಸುಧಾರಣೆ ಕಾಯ್ದೆ ವಿರೋಧಿಸಿ ಹಿರೇಬಾಗೇವಾಡಿಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.

    ಉದ್ಯಮಿ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಅವರು ಜೋಡೆತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಊಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ತಂದಿದ್ದರು.

    ಅದು ರೈತರ ಬಾಳಿಗೆ ಬೆಳಕಾಗಿತ್ತು. ಆದರೆ, ಈಗ ಬಿಜೆಪಿ ಸರ್ಕಾರ ಹಣವಿದ್ದವರನ್ನೇ ಭೂಮಿಯ ಒಡೆಯರನ್ನಾಗಿ ಮಾಡಲು ಹೊರಟಿದ್ದು, ರೈತರ ಬಾಳಿಗೆ ಕೊಳ್ಳಿ ಇಟ್ಟಂತಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆ ಖಂಡಿಸಿ ಅ. 31ರ ವರೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಮೊದಲ ಬಾರಿಗೆ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದರು.

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಅಡಿವೇಶ ಇಟಗಿ ಮತನಾಡಿ, ಪ್ರತಿ ವಾರ್ಡ್‌ನಿಂದ 500 ಜನರ ಸಹಿ ಸಂಗ್ರಹಣೆ ಮಾಡಿ ರಾಷ್ಟ್ರಪತಿಗಳ ಗಮನ ಸೆಳೆಯಲಾಗುತ್ತಿದೆ ಎಂದರು. ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಮಾದುಭರಮಣ್ಣವರ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್. ಪಾಟೀಲ ಮಾತನಾಡಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ, ಯುವ ಧುರೀಣ ಮೃಣಾಲ್ ಹೆಬ್ಬಾಳ್ಕರ್, ಗೌಸಮೋದ್ದೀನ್ ಜಾಲಿಕೊಪ್ಪ, ಬಿ.ಜಿ. ವಾಲಿಇಟಗಿ, ಯಲ್ಲಪ್ಪ ಕೆಳಗೇರಿ, ಉಳವಪ್ಪ ರೊಟ್ಟಿ, ಅನಿಲ ಪಾಟೀಲ, ಆನಂದಗೌಡ ಪಾಟೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts