More

    ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ

    ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ ಮೌನ ಪ್ರತಿಭಟನೆ ನಡೆಸಿತು.

    ಫ್ರೀಡಂ ಪಾರ್ಕ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸೇರಿದಂತೆ ಸಚಿವರು ಹಾಗೂ ಶಾಸಕರು ಪಾಲ್ಗೊಂಡರು. ಡಿಸಿಎಂ ಡಿಕೆಶಿ ಸೇರಿ ಹಲವರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದರೆ, ಮುಖ್ಯಮಂತ್ರ ಸಿದ್ದರಾಮಯ್ಯ ಅವರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದೆ.

    ಇದನ್ನೂ ಓದಿ: ಸಂಚರಿಸುತ್ತಿವೆಯಾ ನಿರುಪಯುಕ್ತ ಕೆಎಸ್​ಆರ್​ಟಿಸಿ ಬಸ್​ಗಳು? ವೈರಲ್​ ಆದ ವಿಡಿಯೋದಲ್ಲಿ ಅಧಿಕಾರಿ ಹೇಳಿದ್ದಿಷ್ಟು…

    ಪ್ರತಿಭಟನೆಯ ವೇಳೆ ಸಿಎಂ ಸಿದ್ದರಾಮಯ್ಯ ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂದು ಬರೆದಿರುವ ಹಾಗೂ ರಾಹುಲ್​ ಗಾಂಧಿ ಫೋಟೋ ಇರುವ ಭಿತ್ತಿ ಫಲಕವನ್ನು ಪ್ರದರ್ಶಿಸಿದರು.

    ಪ್ರತಿಭಟನೆಯಲ್ಲಿ ಸಚಿವರಾದ ಸತೀಶ್​ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ಯು.ಬಿ ವೆಂಕಟೇಶ್, ಸಂತೋಷ್ ಹಾಗೂ ಶಾಸಕ ಪುಟ್ಟರಂಗ ಶೆಟ್ಟಿ, ಆಶೋಕ್ ಪಟ್ಟಣ್, ಪ್ರಕಾಶ್ ಹುಕ್ಕೇರಿ, ಸಲೀಮ್ ಆಹ್ಮದ್ ಭಾಗಿಯಾದರು.

    ಅನರ್ಹತೆಯನ್ನು ಪ್ರಶ್ನಿಸಿ ಸೂರತ್​ ನ್ಯಾಯಾಲಯದಲ್ಲಿ ರಾಹುಲ್​ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಇದಾದ ಬಳಿಕ ರಾಹುಲ್​, ಗುಜರಾತ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಕಳೆದ ಜುಲೈ 7ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ ಸೂರತ್​ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಇದೀಗ ಸುಪ್ರೀಂಕೋರ್ಟ್​ ಮೆಟ್ಟಿಲೇರಲು ರಾಹುಲ್​ ಗಾಂಧಿ ನಿರ್ಧಾರ ಮಾಡಿದ್ದಾರೆ.

    ಅನರ್ಹತೆಗೆ ಕಾರಣವೇನು?

    2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಚಾರ ಮಾಡುವಾಗ ಮಾತನಾಡಿದ್ದ ರಾಹುಲ್​, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

    2019ರಲ್ಲಿ ರಾಹುಲ್ ಗಾಂಧಿ ನೀಡಿದ್ದ​ ಹೇಳಿಕೆಯಿಂದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಅಸಮಾಧಾನಗೊಂಡು ದೂರು ದಾಖಲಿಸಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಇದರ ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ, ಮೇಲ್ಮನವಿ ಸಲ್ಲಿಸಲು ರಾಹುಲ್​ ಅವರಿಗೆ ನ್ಯಾಯಾಲಯ ಕಾಲಾವಕಾಶ ನೀಡಿದೆ. ಆದರೆ, ಸಂಸತ್ತಿನ ಕಾರ್ಯದರ್ಶಿ, ರಾಹುಲ್​ ಅವರನ್ನು ಲೋಕಸಭಾ ಸದಸ್ಯತ್ವದಿಂದ ವಜಾಗೊಳಿಸಿದ್ದಾರೆ.

    ಇದನ್ನೂ ಓದಿ: ಭಾರೀ ಮಳೆಗೆ ಹಿಮಾಚಲ ಪ್ರದೇಶ ತತ್ತರ: ಡ್ರೋನ್​ ಕ್ಯಾಮೆರಾದಲ್ಲಿ ಪ್ರವಾಹದ ಭಯಾನಕ ದೃಶ್ಯಗಳು ಸೆರೆ!

    ಮಾನಹಾನಿ ಪ್ರಕರಣದಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​, 1951ರ ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ 8 ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಒಂದು ವೇಳೆ ಸೂರತ್​ ನ್ಯಾಯಾಲಯ ನೀಡಿರುವ ತೀರ್ಪನ್ನು ಉನ್ನತ ನ್ಯಾಯಾಲಯ ವಜಾಗೊಳಿಸಿದರೆ ರಾಹುಲ್​ ನಿರಾಳರಾಗಲಿದ್ದಾರೆ. ಇನ್ನು ರಾಹುಲ್​ರನ್ನು ಅನರ್ಹಗೊಳಿಸಿರುವ ನಿರ್ಧಾರ ಕೇಂದ್ರದ ರಾಜಕೀಯ ದ್ವೇಷ ಎಂದು ಆರೋಪ ಮಾಡಿದ್ದಾರೆ. (ಏಜೆನ್ಸೀಸ್​)

    ರಾಹುಲ್​ ಗಾಂಧಿ ಅನರ್ಹತೆ ವಿಚಾರ: ಅಮೆರಿಕ ಕೊಟ್ಟ ಪ್ರತಿಕ್ರಿಯೆ ಹೀಗಿದೆ…

    ರಾಹುಲ್​ ಗಾಂಧಿ ಅನರ್ಹ ಪ್ರಕರಣದಲ್ಲಿ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು: ಜರ್ಮನಿ ಅಭಿಪ್ರಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts