ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಿ: ಕಾಂಗ್ರೆಸ್​ ಟೀಕೆ

Bjp vs Congress
Published on

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಹನಿಟ್ರ್ಯಾಪ್​ಗೆ ಬಳಸಿಕೊಳ್ಳುತ್ತಿದ್ದ ಅರೋಪದ ಮೇಲೆ ಪೊಲೀಸರ ವಶದಲ್ಲಿರುವ ಆರ್​ಆರ್​ ನಗರ ಕ್ಷೇತ್ರದ ಶಾಸಕ ಮುನಿರತ್ನ ಕುರಿತು ಒಂದೊಂದೇ ಆಘಾತಕಾರಿ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಇದೀಗ ಶಾಸಕ ಮುನಿರತ್ನ ವಿರುದ್ಧ ಏಡ್ಸ್​​ ಹಬ್ಬಿಸುವ ಆರೋಪ ಒಂದು ಕೇಳಿ ಬಂದಿದೆ.

ಬಿಜೆಪಿ ಶಾಸಕ ಮುನಿರತ್ನ ಟಾರ್ಗೆಟ್ ಮಾಡಿದ್ದ ನಾಯಕರನ್ನ ಹೂ ಗುಚ್ಛ ನೀಡುವ ನೆಪದಲ್ಲಿ ಇಂಜೆಕ್ಟ್‌ ಮಾಡಲು ಏಡ್ಸ್ ರಕ್ತ ಬಳಸಿ ಎಚ್‌ಐವಿ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್​ ಮಾಡಿದ್ದು, ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ ಎಂದು ಟೀಕಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಕಾಂಗ್ರೆಸ್​ ಘಟಕ, ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಟ್ವೀಟ್​ ಮಾಡುವ ಮೂಲಕ ವ್ಯಂಗ್ಯವಾಡಿದೆ.

ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿನಿಂದನೆ ಮಾಡಿದ ಆರೋಪದ ಮೇಲೆ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಕಗ್ಗಲೀಪುರದ ಬಳಿ ಇರುವ ಖಾಸಗಿ ರೆಸಾರ್ಟ್​, ಜೆಪಿ ಪಾರ್ಕ್​ ಬಳಿ ಗೋಡೌನ್​ನಲ್ಲಿ ಸ್ಥಳ ಮಹಜರು ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net