ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ; ಮಾಜಿ ಸಿಎಂ ಎಚ್​ಡಿಕೆ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ

HDK Congress

ಬೆಂಗಳೂರು: ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ ಎಂದು ರಾಜ್ಯ ಕಾಂಗ್ರೆಸ್​ ಘಟಕ ವಾಗ್ದಾಳಿ ನಡೆಸಿದೆ.

blank

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಕಾಂಗ್ರೆಸ್​ ಘಟಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹಾಗೂ ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ ಎಂದು ಟೀಕಿಸಿದೆ.

ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ ಕೋಮು-ಕುಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ.

ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ. ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ ಕೋಮು-ಕುಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು. ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ. ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ ಎಂದು ಕಿಡಿಕಾರಿದೆ.

ಇದನ್ನೂ ಓದಿ: ಬಹುಕೋಟಿ ವಂಚನೆ ಪ್ರಕರಣ; ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ನ್ಯಾಯಾಲಯ

ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು ಎಂದು ವಾಗ್ದಾಳಿ ನಡೆಸಿದೆ.

ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು, ಮಸೀದಿ ಹೊಕ್ಕಿದ್ದೇನು, ಆಹಾ ಅದೇನು ನಾಟಕ, ಅದೇನು ಪಂಚರಂಗಿ ಆಟಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ ಎಂದು ಖಾರವಾಗಿ ಪ್ರಶ್ನಿಸಿದೆ.

ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ.

ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ ಅಲ್ ದ ಬೆಸ್ಟ್ ಎಂದು ರಾಜ್ಯ ಕಾಂಗ್ರೆಸ್​ ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank