

ಬೆಂಗಳೂರು: ಗೃಹ ಖಾತೆಯನ್ನು ಪರಮೇಶ್ವರ್ ಪ್ರಿಯಾಂಕ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಬಿಜೆಪಿಗರ ಇತ್ತೀಚಿನ ಮಾತು ಕೃತಿ ಗಮನಿಸಿದರೆ ನಮ್ಮ ಸರ್ಕಾರ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆಯನ್ನೂ ರೂಪಿಸಬೇಕಾದೀತು ಎಂದು ಟಾಂಗ್ ಕೊಟ್ಟಿದೆ.
ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ, ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ವೃತ್ತಿ ಕುರಿತು ಅವಹೇಳನ ಮಾಡಿದ ಯುವಕನಿಗೆ ಬರ್ಬರ ಇರಿತ!
ಪ್ರಿಯಾಂಕ ಖರ್ಗೆ ಅವರು ಕಲಬುರ್ಗಿಯ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸುವುದು ಅವರ ಹೊಣೆಗಾರಿಕೆ, ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು ಕಾಮಿಡಿ ಕಿಲಾಡಿ ಎನ್ನುವುದು.
ಕಟೀಲ್ ಅವರೇ, ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನವೆಂದು ಪ್ರಿಯಾಂಕ ಖರ್ಗೆ ಕುರಿತ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ಕೊಟ್ಟಿದೆ.