ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು: ಕಾಂಗ್ರೆಸ್​​

bjp vs congress
Published on

ಬೆಂಗಳೂರು: ಬಿಜೆಪಿ ಕುರಿತು ಸರಣಿ ಟ್ವೀಟ್​​ ಮೂಲಕ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ಶಾಸಕರಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅರ್ಹ ಶಾಸಕನಿಲ್ಲದೆ ಇರುವುದು ನಾಚಿಕೆಯ ಸಂಗತಿ ಎಂದು ಟ್ವೀಟ್​ ಮಾಡಿದೆ.

"ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ" ಎಂದು ಟ್ವೀಟ್​ ಮಾಡಿದೆ.

"ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ'ಯೂ ಇಲ್ಲ. ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ. ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಎಂಬುದನ್ನು ಬಿಜೆಪಿ ಉತ್ತರಿಸಬೇಕು" ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯವಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net