ಬಡವರ ಅನ್ನಕ್ಕೆ ಕಾಂಗ್ರೆಸ್ ಕಲ್ಲು

Gururaj
Published on

ಗಂಗೊಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಬಡವರ ಹೊಟ್ಟೆ ಮೇಲೆ ಹೊಡೆಯುದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಡಿತರ ವಿತರಣೆ ಮತ್ತು ಬಿಪಿಎಲ್ ರೇಷನ್ ಕಾರ್ಡ್ ರದ್ದುಪಡಿಸಿ ಬಡವರ ತುತ್ತು ಅನ್ನಕ್ಕೂ ಕಲ್ಲು ಹಾಕಿದ್ದಲ್ಲದೆ, ಕೇಂದ್ರ ಸರ್ಕಾರದಿಂದ ಬಡವರಿಗೆ ಸಿಗುತ್ತಿರುವ ಆಯುಷ್ಮಾನ್ ಯೋಜನೆ ಮತ್ತು ಇನ್ನಿತರ ಸೌಲಭ್ಯಗಳ ಅವಕಾಶವನ್ನೂ ಕಿತ್ತುಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಸಮಸ್ಯೆ ಬಗೆಹರಿಸಿ ಮೊದಲಿನಂತೆ ಪಡಿತರ ಮತ್ತು ಪಡಿತರ ಚೀಟಿ ಬಡವರಿಗೆ ವಿತರಿಸಬೇಕು. ಜನರೊಂದಿಗೆ ಬೀದಿಗಿಳಿದು ಹೋರಾಟ ನಡೆಸುವ ಹಂತಕ್ಕೆ ಹೋಗುವ ಮುನ್ನ ಬಡವರಿಗಾಗುತ್ತಿರುವ ಅನ್ಯಾಯ ಕೂಡಲೇ ಸರಿಪಡಿಸಬೇಕೆಂದು ಶಾಸಕ ಗುರುರಾಜ್ ಗಂಟಿಹೊಳೆ ಸರ್ಕಾರವನ್ನು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net