More

    ದೆಹಲಿಯಲ್ಲಿ ಕಾಂಗ್ರೆಸ್ ಬೀದಿ ನಾಟಕ; ಬಿಜೆಪಿ ಆಕ್ರೋಶ

    ಬೆಂಗಳೂರು: ಅನುದಾನಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯದ ಆಡಳಿತ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆಗೆ ಪ್ರತಿಯಾಗಿ ವಿರೋಧ ಪಕ್ಷ ಬಿಜೆಪಿ, ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಬುಧವಾರ ನಡೆಸಿ, ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು ದೆಹಲಿಯಲ್ಲಿ ಬೀದಿ ನಾಟಕವಾಡುತ್ತಿದೆ ಎಂದು ಆಜ್ರೋಶ ವ್ಯಕ್ತಪಡಿಸಿತು.

    ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ‌ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ,‌ ರೈತ ವಿರೋಧಿ, ಅಭಿವೃದ್ಧಿ ವಂಚಿಸಿದ ಜನ ವಿರೋಧಿ ಸರ್ಕಾರವೆಂದು ಧಿಕ್ಕಾರ ಮೊಳಗಿಸಿ, ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

    ಸಿದ್ದರಾಮಯ್ಯರ ಸರಕಾರಕ್ಕೆ ಧಿಕ್ಕಾರ, ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರಾಜ್ಯದ ರೈತರನ್ನು ಕಣ್ಣೀರು ಹಾಕಿಸುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರವೆಙದು ಕೂಗಿದರು. ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

     ಬರಗಾಲದಿಂದ ತತ್ತರಿಸಿರುವ ರೈತರು ಸಾಲದ ಬಾಧೆ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ತ್ವರಿತವಾಗಿ ಸ್ಪಂದಿಸುವ ಬದಲು ಕೇಂದ್ರದ ಮೇಲೆ ಗೂಬೆ ಕೂರಿಸಿ ತನ್ನ ಜವಾಬ್ದಾರಿಯಿಂದು ನುಣುಚಿಕೊಳ್ಳುತ್ತಿದೆ. ರಾಜ್ಯದಲ್ಲಿ ಅರಾಜಕತೆಯನ್ನು ಕಾಂಗ್ರೆಸ್ ಸರ್ಕಾರ ದೆಹಲಿಗೆ ಪಲಾಯನ ಮಾಡಿದೆ ಎಂದು ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದರು.

    ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts