More

    ಸುಳ್ಳು ಹೇಳುವುದರಿಂದ ಅಲೆ ಸೃಷ್ಟಿಸಬಹುದು ಎಂಬುದು ಕಾಂಗ್ರೆಸ್ ಯೋಚನೆ, ಆದರೆ..: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಜೈಪುರ: ರಾಜಸ್ಥಾನದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಮಾತ್ರವಲ್ಲ, ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪಗಳೂ ಜೋರಾಗಿವೆ.

    ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಉಸ್ತುವಾರಿ ವಹಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿನ ಕಾಂಗ್ರೆಸ್ ನಡೆಯೊಂದನ್ನು ಟೀಕಿಸಿರುವ ಅವರು ಅದಕ್ಕೆ ಸಂಬಂಧಿಸಿದಂತೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಎಂದು ಅವರು ಇಂದು ಒಂದು ಜಾಹೀರಾತು ನೀಡಿದ್ದಾರೆ. ಆದರೆ ಮುಖ್ಯಮಂತ್ರಿಯ ಸಾರ್ವಜನಿಕ ಸಭೆಗೇ ಜನರು ಬರುತ್ತಿಲ್ಲ. ಐದು ವರ್ಷಗಳಿಂದ ನಿದ್ರೆ ಮಾಡುತ್ತಿರುವ ಕಾಂಗ್ರೆಸ್ ಜನರಿಗೆ ಕೊಟ್ಟ ಒಂದು ಭರವಸೆಯನ್ನು ಕೂಡ ಈಡೇರಿಸಿಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದ ಜನತೆಗೆ ಸುಳ್ಳು ಹೇಳುವುದರಿಂದ ಅಲೆ ಸೃಷ್ಟಿಸಬಹುದು ಎಂಬುದು ಕಾಂಗ್ರೆಸ್​ನವರ ಯೋಚನೆ. ಆದರೆ ಜನರು ಅವರನ್ನು ಬುಡಸಮೇತ ತೊಲಗಿಸಲು ನಿರ್ಧರಿಸಿದ್ದಾರೆ ಎಂಬುದಾಗಿ ರಾಜಸ್ಥಾನ ಕಾಂಗ್ರೆಸ್ ನಡೆ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

    ಖ್ಯಾತ ಬೌಲರ್​ಗೆ ಮೋದಿಯ ಸಾಂತ್ವನದ ಅಪ್ಪುಗೆ: ನಾವು ಮತ್ತೆ ಪುಟಿದೇಳುತ್ತೇವೆ ಎಂದ ಶಮಿ; ವೈರಲ್ ಆಗುತ್ತಿದೆ ಫೋಟೋ!

    ಪೋಕ್ಸೋ ಪ್ರಕರಣ: ಮುರುಘಾಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ; ಕಾರಣ ಏನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts