More

    ಕಾಂಗ್ರೆಸ್​ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿ ನಾಲ್ವರ ಬಂಧನ

    ಬೆಂಗಳೂರು: ನಗರದ ಕೆ.ಆರ್.ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ಬಳಿ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸರು ಹಿಂದು ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

    ನಾಗಸಂದ್ರದ ಬಳಿ ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಮು ಸೌಹಾರ್ದತೆಗೆ ಧಕ್ಕೆ ಯತ್ನದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶಿವಮೊಗ್ಗದ ಮಾಲ್​ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ನಿನ್ನೆ (ಆ.13) ಫೋಟೋ ತೆಗೆಸಿದ್ದರು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡ ಕೆ.ಆರ್. ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ಎರಡೂ ಕಡೆ ಅಳವಡಿಸಿದ್ದ ಟಿಪ್ಪು ಸುಲ್ತಾನ್​ ಫ್ಲೆಕ್ಸ್​ಗಳನ್ನು ನಿನ್ನೆ ರಾತ್ರಿ ಹರಿದುಹಾಕಿದ್ದರು.

    75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​ ಪಕ್ಷ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಗರದ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್​ಗಳು ರಾರಾಜಿಸುತ್ತಿವೆ. ಈ ವೇಳೆ ಟಿಪ್ಪು ಸುಲ್ತಾನ್ ಭಾವಚಿತ್ರವಿರುವ ಫೋಟೋವನ್ನು ಪುನೀತ್​ ಕೆರೆಹಳ್ಳಿ ತಂಡ ಹರಿದುಹಾಕಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪರಿಶೀಲನೆ ನಡೆಸಿ, ಹಡ್ಸನ್ ಸರ್ಕಲ್ ಮಾತ್ರವಲ್ಲ ಎರಡು ಕಡೆ ಹರಿದು ಹಾಕಿದ್ದಾರೆ. ನಾವು ದೇಶಕ್ಕಾಗಿ ಹೋರಾಡಿದವರ ಚರಿತ್ರೆ ಓದಿದ್ದೇವೆ. ರಾಷ್ಟ್ರಪತಿಯಾಗಿದ್ದ ಕೋವಿಂದ್ ಕೂಡ ಬಂದು ಪಾಠ ಹೇಳಿದ್ದಾರೆ. ಆದರೆ, ಇವತ್ತು ಟಿಪ್ಪು ಸುಲ್ತಾನ್ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ನಾನು ಘಟನಾ ಸ್ಥಳಕ್ಕೆ ಬಂದು ನೋಡಿದ್ದೇನೆ. ಪೊಲೀಸರ ಕಾವಲು ನಡುವೆ ಹರಿದು ಹೋಗಿದ್ದಾರೆ. ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯದ್ದಾಗಿರುತ್ತದೆ. ನಾವೆಲ್ಲ ಶಾಂತಿಯಿಂದ ಇರೋಣ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು.

    ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿರೋಧಿಸಿದ್ದಕ್ಕೆ ಬೆಂಗ್ಳೂರಲ್ಲಿ ಟಿಪ್ಪು ಫೋಟೋ ಹರಿದ ಪುನೀತ್​ ಕೆರೆಹಳ್ಳಿ ಟೀಂ

    ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ BMTCಯಿಂದ 75 ಎಲೆಕ್ಟ್ರಿಕ್ ಬಸ್: ಸಿಎಂ ಬೊಮ್ಮಾಯಿರಿಂದ ಲೋಕಾರ್ಪಣೆ

    ಧ್ವಜಾರೋಹಣ, ಜಾಥಾ, ಮೆರವಣಿಗೆ… ಬೆಂಗಳೂರಲ್ಲಿ ಸಂಚಾರ ಬದಲು: ಎಲ್ಲೆಲ್ಲಿ ಪಾರ್ಕಿಂಗ್​, ಪಾಸ್​ ಹೇಗೆ? ಇಲ್ಲಿದೆ ಡಿಟೇಲ್ಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts