More

    ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು: ಕೇರಳ ಶಾಸಕ ಅನ್ವರ್‌ ವಿವಾದಾತ್ಮಕ ಹೇಳಿಕೆ!

    ತಿರುವನಂತಪುರಂ: ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್‌ಎ ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇದನ್ನೂ ಓದಿ: ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?

    ಪಾಲಕ್ಕಾಡ್‌ನಲ್ಲಿ ಸಿಪಿಐ(ಎಂ) ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪಿ.ವಿ.ಅನ್ವರ್, ”ರಾಹುಲ್‌ ಗಾಂಧಿ ಅವರು ನೆಹರೂ ವಂಶಸ್ಥರಿಂದ ನಿರೀಕ್ಷಿಸುವ ಗುಣಮಟ್ಟವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರದರ್ಶಿಸುತ್ತಿಲ್ಲ. ಹೀಗಾಗಿ ಅವರ ಡಿಎನ್‌ಎಯನ್ನು ಪರೀಕ್ಷಿಸಬೇಕುʼʼ ಎಂದು ಪಿ.ವಿ.ಅನ್ವರ್‌ ಹೇಳಿದ್ದಾರೆ.

    ನಾನು ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡ್‌ನ ಭಾಗವಾಗಿದ್ದೇನೆ. ನಾನು ಅವರನ್ನು ಗಾಂಧಿ ಎಂಬ ಉಪನಾಮದಿಂದ ಕರೆಯಲು ಸಾಧ್ಯವಿಲ್ಲ. ಅವರು ಗಾಂಧಿ ಉಪನಾಮದಿಂದ ಕರೆಯಲು ಅರ್ಹರಲ್ಲದ ನಾಗರಿಕನಾಗಿ ಮಾರ್ಪಟ್ಟಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ. ಕಳೆದ ಎರಡು ದಿನಗಳಿಂದ ಭಾರತದ ಜನರು ಇದನ್ನು ಹೇಳುತ್ತಿದ್ದಾರೆʼʼ ಎಂದು ನಿಲಂಬೂರು ಕ್ಷೇತ್ರದ ಶಾಸಕ ಅನ್ವರ್ ಹೇಳಿದ್ದಾರೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಳ ದರ್ಜೆಯ ನಾಗರಿಕ. ರಾಹುಲ್ ಅವರು ನೆಹರು ಕುಟುಂಬದವರೋ, ಅಲ್ಲವೋ ಎಂಬುದನ್ನು ತಿಳಿಯಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕು’ ಎಂದು ಕೇರಳದ ಪಕ್ಷೇತರ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಈ ಹೇಳಿಕೆಯ ಬಗ್ಗೆ ಗರಂ ಆಗಿರುವ ಕಾಂಗ್ರೆಸ್, ಅನ್ವರ್ ಆಕ್ಷೇಪಾರ್ಹ ಹೇಳಿಕೆ ಹಿಂದೆ ಸಿಎಂ ಪಿಣರಾಯ್ ಪಾತ್ರವಿದೆ ಎಂದು ಆರೋಪಿಸಿದೆ. ಕೂಡಲೇ ಅವರ ವಿರುದ್ಧ ಕ್ರಮಕ್ಕೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

    ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts