ಕಾಂಗ್ರೆಸ್ ಮೀಸಲಾತಿ ವಿರೋಧಿ; ಸಂಸದ ರಮೇಶ ಜಿಗಜಿಣಗಿ ಹೇಳಿಕೆ

JIGAJINAGI PRESS MEET

ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಯಾವಾಗಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಈಗ ರಾಹುಲ್ ಗಾಂಧಿ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುವ ಮೂಲಕ ಅದನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಅಮೇರಿಕದಲ್ಲಿ ರಾಹುಲ್ ಗಾಂಧಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿರುವುದು ಖಂಡನೀಯ. ಮೀಸಲು ರದ್ದು ಮಾಡುತ್ತೇವೆ ಎಂದು ಹೇಳಲು ಮೀಸಲಾತಿ ಎಂಬುದು ಕಾಂಗ್ರೆಸ್ ಕೊಟ್ಟಿರುವ ಭಿಕ್ಷಾ ಪಾತ್ರೆಯಲ್ಲ. ಮೀಸಲಾತಿ ದಲಿತರ ಜನ್ಮ ಸಿದ್ಧ ಹಕ್ಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ದಲಿತರ ಕುರಿತು ಕಾಂಗ್ರೆಸ್ ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ಸಂಸತ್ತಿನಲ್ಲಿ ಸಂವಿಧಾನ ಹಿಡಿದು ರಾಹುಲ್ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೆಲ್ಲ ಸುಮ್ಮನೆ ಅವರ ತೋರಿಕೆ ಮಾತ್ರ. ದಲಿತರ 25 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಅನ್ಯ ಯೋಜನೆಗಳಿಗೆ ರಾಜ್ಯ ಸರ್ಕಾರ ಹಂಚಿಕೆ ಮಾಡಿದೆ. ಅಲ್ಲದೇ, ದೇಶ ವಿಭಜನೆಯ ಶಕ್ತಿಯೊಂದಿಗೆ ರಾಹುಲ್ ಕಾಣಿಸಿಕೊಂಡಿದ್ದಾರೆ. ದೇಶದ ಭದ್ರತೆಗೆ ಯಾವಾಗಲೂ ರಾಹುಲ್ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ವಿಚಾರ ಪ್ರತಿಕ್ರಿಯಿಸಿ, ಈ ಗಲಾಟೆಗೆ ಪ್ರಚೋದನೆಯೇ ಕಾರಣ. ಈ ರೀತಿ ಪ್ರಚೋದನೆಯಿಂದ ದೇಶ, ಇತರ ರಾಜ್ಯದಲ್ಲಿ ಆಗುತ್ತದೆ ಎಂದರು.

ರಾಜ್ಯದಲ್ಲಿ ದಲಿತ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದ ಜಿಗಜಿಣಗಿ, ಸಿಎಂ ಆಗದಿರಲು ದಲಿತರು ಅಯೋಗ್ಯರಾ? ಸಿಎಂ ಬದಲಾವಣೆ ಮಾಡಿದ್ರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಲ್ಲಿಗೆ ತಂದು ಮುಖ್ಯಮಂತ್ರಿ ಮಾಡಲಿ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಅರುಣ ಶಹಾಪುರ, ವಿಜುಗೌಡ ಪಾಟೀಲ, ಸಂಜೀವ ಐಹೊಳೆ, ಮಳುಗೌಡ ಪಾಟೀಲ, ಸಾಬು ಮಾಶಾಳ, ಈರಣ್ಣ ರಾವೂರ, ವಿಜಯ ಜೋಶಿ ಮತ್ತಿತರರಿದ್ದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…