More

    ರಾಜಕೀಯ ಲಾಭಕ್ಕೆ ಕೋರ್ಟ್ ಮೋರೆ ಹೋದ ಕಾಂಗ್ರೆಸ್

    ಕೋಲಾರ: ಕೇಂದ್ರದಿಂದ ರಾಜ್ಯಕ್ಕೆ ಪರಿಹಾರದ ಅನುದಾನ ಬಿಡುಗಡೆ ಮಾಡಿದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರವು ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಕೋರ್ಟ್ ಮೋರೆ ಹೋಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಆರೋಪಿಸಿದರು.

    ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಗೋಷ್ಠಿಯಲ್ಲಿ ಮಾತನಾಡಿ, ನಿಯಮಗಳ ಪ್ರಕಾರವೇ ಕೇಂದ್ರ ಸರ್ಕಾರವು ರಾಜ್ಯಕ್ಕೆ ಪರಿಹಾರದ ಹಣ ಬಿಡುಗಡೆ ಮಾಡಿದೆ. ಆದರೂ ಕಾಂಗ್ರೆಸ್‌ನವರು ಸಾಲದು ಎಂದು ಅಂಗಲಾಚುತ್ತಿದ್ದಾರೆ. ಪ್ರಧಾನಿ ಅವರು ರಾಜ್ಯಕ್ಕೆ ಸುಮಾರು 3,454 ಕೋಟಿ ರೂ. ಬರ ಪರಿಹಾರ ನೀಡಿದ್ದಾರೆ. ಇದನ್ನು ಕಾಂಗ್ರೆಸ್ ಸರ್ಕಾರವು ಲೋಕಸಭಾ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಅನುಮಾನ ಕಾಡುತ್ತಿದೆ. ಈಗ ಬಿಡುಗಡೆಯಾಗಿರುವ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
    ನರೇಂದ್ರ ಮೋದಿ ಅವರಿಗೆ ಪ್ರತಿಯೊಂದು ರಾಜ್ಯದ ಮೇಲೆ ಪ್ರೀತಿ ಇದೆ. ಆದರೆ ಪರಿಹಾರದ ಹಣವನ್ನು ಪಡೆದುಕೊಳ್ಳದೆ, ಸುಖಾಸುಮ್ಮನೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ಬೊಬ್ಬೆ ಯೊಡೆಯುತ್ತಿದೆ ಎಂದು ಆರೋಪಿಸಿದರು.
    ರಾಜ್ಯದಲ್ಲಿ ಮಳೆ, ಬೆಳೆ ಇಲ್ಲದೆ ಜನತೆ ಬರದಿಂದ ತತ್ತರಿಸಿದ್ದಾರೆ. 30 ಸಾವಿರ ಕೋಟಿ ರೂ. ವೆಚ್ಚದ ಬೆಳೆಗಳು ನಷ್ಟವಾಗಿವೆ. ಮಾರ್ಗಸೂಚಿ ಪ್ರಕಾರ 4,860 ಕೋಟಿ. ರೂ. ಪರಿಹಾರ ನೀಡಬೇಕು. ಆದರೆ ರಾಜ್ಯ ಸರ್ಕಾರ ಏಕೆ ಮೀನಮೇಷ ಎಣಿಸುತ್ತಿದೆ ಎಂದು ಪ್ರಶ್ನಿಸಿದರು.
    ಕೇಂದ್ರ ಸರ್ಕಾರ 3,454 ಕೋಟಿ ರೂ. ನೀಡಿದೆ, ನಂತರ 18,172 ಕೋಟಿ ರೂ. ನೀಡಬೇಕೆಂದರು. ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲು ಕಾಂಗ್ರೆಸ್‌ಗೆ ನೈತಿಕತೆಯಿಲ್ಲ. ಇದು ಲೋಕಸಭಾ ಚುನಾವಣೆಯಲ್ಲಿ ಬೇಳೆ ಬೇಯಿಸಿಕೊಳ್ಳಲು ಆಡುತ್ತಿರುವ ದೊಡ್ಡ ಡ್ರಾಮಾ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು.
    ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಎಸ್.ಬಿ.ಮುನಿವೆಂಕಟಪ್ಪ, ಶ್ರೀನಿವಾಸಪುರ ಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್, ಪ್ರಧಾನ ಕಾರ್ಯಕದರ್ಶಿ ಅಪ್ಪಿರಾಜು, ಮಾದ್ಯಮ ಪ್ರಮುಖ್ ಪ್ರವೀಣ್‌ಗೌಡ, ಸಹ ಪ್ರಮುಖ್ ಕೆಂಬೋರಿ ನಾರಾಯಣಸ್ವಾಮಿ, ಕಾರ್ಯಾಲಯ ಕಾರ್ಯದರ್ಶಿ ರಾಜೇಶ್‌ಸಿಂಗ್ ಹಾಜರಿದ್ದರು.


    * ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ
    ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲು ರಾಜ್ಯ ಸರ್ಕಾರವು ಎಸ್‌ಐಟಿಗೆ ಸೂಚಿಸಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರ ಬೀಳಲಿದ್ದು, ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸುತ್ತಾರೆ ಎಂದು ಡಾ.ಕೆ.ಎನ್.ವೇಣುಗೋಪಾಲ್ ಪ್ರತಿಕ್ರಿಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts