ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಕಾಂಗ್ರೆಸ್‌ಗೆ ಸಂತೋಷವಂತೆ!

dks vs ct ravi
Published on

ಬೆಂಗಳೂರು: ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಸಂತೋಷದಿಂದ ಸ್ವಾಗತಿಸುವುದಾಗಿ ಕೆಪಿಸಿಸಿ ಅಚ್ಚರಿಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ರೀತಿ ಹೇಳುವುಕ್ಕೆ ಒಂದಷ್ಟು ವ್ಯಂಗ್ಯಭರಿತ ಸಮರ್ಥನೆಯನ್ನೂ ನೀಡಿದೆ.

ವಿಧಾನಸಭೆ ಚುನಾವಣೆಯಲ್ಲಿ ತವರು ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ, ಬೇರೆ ಕ್ಷೇತ್ರವನ್ನು ಗೆಲ್ಲಿಸುವುದಿರಲಿ, ಸ್ವತಃ ತಾವೇ ಹಿನಾಯವಾಗಿ ಸೋತಿದ್ದಾರೆ, ತಮಿಳುನಾಡಿನ ಉಸ್ತುವಾರಿಯಾಗಿ ಮಾಡಿದ ಸಾಧನೆ ಶೂನ್ಯ ಎಂದು ಲೇವಡಿ ಮಾಡಿದೆ.

ಇಂತಹ ಹಲವು ವೈಫಲ್ಯಗಳ ಸರದಾರ ಸಿಟಿ ರವಿಯನ್ನು ಬಿಜೆಪಿಯ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೆ ಕಾಂಗ್ರೆಸ್ ಭಾರಿ ಲಾಭವಾಗಲಿದೆ. ಅಕಸ್ಮಾತ್ ಬಿಜೆಪಿ ಅವರಿಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಪಕ್ಷ ಸಂತೋಷದಿಂದ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಜಾಲತಾಣದಲ್ಲಿ ಹೇಳಿಕೊಂಡಿದೆ.

ಕಾಂಗ್ರೆಸ್‌ನ ಈ ಅಭಿಪ್ರಾಯಕ್ಕೆ ಸಾರ್ವಜನಿಕರೂ ಸಹ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿ, ಪರೋಕ್ಷವಾಗಿ ರಾಹುಲ್ ಗಾಂಧಿಗೆ ಹೇಳಿದಂತಿದೆ.... ಈ ಮಾತನ್ನು ರಾಹುಲ್ ಗಾಂಧಿಗೆ ಹೇಳಿದರೆ ಸಖತ್ತಾಗಿರುತ್ತದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net