More

    ಕಾಂಗ್ರೆಸ್ ಫೇಲ್ ಆಗುವ ಪಕ್ಷ: ಬೊಮ್ಮಾಯಿ

    ಶಿವಮೊಗ್ಗ: ಕಾಂಗ್ರೆಸ್ ಹೊಸ ಗ್ಯಾರಂಟಿಗಳನ್ನು ಘೊಷಣೆ ಮಾಡಿದ್ದು, ಪ್ರತಿ ಮನೆ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಡುವುದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ಆದರೆ ಅಧಿಕಾರಕ್ಕೆ ಬಾರದೆ ಘೋಷಣೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲವೇ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

    ನಗರದ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಬೃಹತ್ ಮೆರವಣಿಗೆಯಲ್ಲಿ ಮಾತನಾಡಿ, ಕಾಂಗ್ರೆಸ್ ಎಂದರೆ ಫೇಲ್ ಆಗುವ, ಬೇಕಾಬಿಟ್ಟಿ ಪಕ್ಷ. ಲೋಕಸಭೆಯಲ್ಲಿ 543 ಸ್ಥಾನ ಇದ್ದು, ಸ್ಪಷ್ಟ ಬಹುಮತಕ್ಕೆ 272 ಸ್ಥಾನ ಬೇಕು. ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಯಾವ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
    ಕರೊನಾ ಸಂದರ್ಭದಲ್ಲಿ ದೇಶದ 130 ಕೋಟಿ ಜನರಿಗೆ ಪ್ರಧಾನಿ ಮೋದಿ ಮೂರು ಬಾರಿ ಲಸಿಕೆ ಕೊಡಿಸಿ ಎಲ್ಲರ ಜೀವ ಉಳಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದು, ಈಗಲೂ ಐದು ಕೆಜಿ ಅಕ್ಕಿಯನ್ನು ಮೋದಿ ಸರ್ಕಾರ ಉಚಿತವಾಗಿ ನೀಡುತ್ತಿದೆ. ಪ್ರತಿ ಮನೆಗೂ ಗಂಗೆ ರೂಪದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಳದ ನೀರು ಕೊಡಲಾಗುತ್ತಿದೆ. ಎಲ್ಲರಿಗೂ ಅನ್ನ, ನೀರು, ಲಸಿಕೆ ಕೊಟ್ಟು ಜೀವ ಉಳಿಸಿದ್ದಾರೆ. ಎಲ್ಲರೂ ಕಮಲದ ಗುರುತಿಗೆ ಮತ ಹಾಕಿ, ನರೇಂದ್ರ ಮೋದಿ ಅವರ ಋಣ ತೀರಿಸಬೇಕು ಎಂದು ಹೇಳಿದರು.
    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಿ.ಟಿ.ರವಿ, ಬೈರತಿ ಬಸವರಾಜ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಶಾಸಕ ಆರಗ ಜ್ಞಾನೇಂದ್ರ, ಶಾರದಾ ಪೂರ‌್ಯಾನಾಯ್ಕಾ ಹಾಜರಿದ್ದರು.

    ಗಣಪತಿ ದರ್ಶನ ಪಡೆದ ಬೊಮ್ಮಾಯಿ
    ಮಾಜಿ ಸಿಎಂ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗುರುವಾರ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಎಂಎಲ್‌ಸಿ ಡಿ.ಎಸ್.ಅರುಣ್ ಸಾಥ್ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts