More

    ನಿರೀಕ್ಷೆಯಂತೆ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಸಿಗಲಿದೆ: ಸಿದ್ದರಾಮಯ್ಯ

    ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ರಿಲ್ಯಾಕ್ಸ್​ ಮೂಡಿಗೆ ಜಾರಿರುವ ರಾಜಕೀಯ ಪಕ್ಷಗಳ ನಾಯಕರು ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.

    ಮತದಾನೋತ್ತರ ಸಮೀಕ್ಷೆಗಳನ್ನು ಆಧರಿಸಿ ರಾಜಕೀಯ ಪಕ್ಷಗಳ ನಾಯಕರು ತಮ್ಮ ಪಾರ್ಟಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

    ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ

    ಈ ಕುರಿತು ಮೈಸೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮತದಾನೋತ್ತರ(Exit Polls) ಸಮೀಕ್ಷೆಗೆಳು ಸಹ ಕಾಂಗ್ರೆಸ್​ ಪರವಾಗಿ ಬರುತ್ತಿವೆ. ನಮ್ಮ ನಿರೀಕ್ಷೆ ಪ್ರಕಾರ ರಾಜ್ಯದಲ್ಲಿ ನಾವು 130-150 ಸೀಟುಗಳನ್ನು ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

    Siddaramaiah

    ಇದನ್ನೂ ಓದಿ: ಎಕ್ಸಿಟ್ ಪೋಲ್ ಒಂದೇ ರೀತಿ ಇಲ್ಲ; ಮೇ 13ರವರೆಗೆ ಕಾಯೋಣ: ಬೊಮ್ಮಾಯಿ‌

    ಕರಾವಳಿ ಭಾಗದಲ್ಲಿ ಹೆಚ್ಚು ಗೆಲ್ಲುತ್ತೇವೆ

    ಕಾಂಗ್ರೆಸ್​ ಪಕ್ಷವು ಕರಾವಳಿ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದೆ. ಹಳೇ ಮೈಸೂರು ಭಅಗದಲ್ಲಿ ಕಾಂಗ್ರೆಸ್​-ಜೆಡಿಎಸ್​ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು ಬಿಜೆಪಿ ಇಲ್ಲಿ ನಮಗೆ ಪ್ರಬಲ ಸ್ಪರ್ಧೆ ನೀಡುವ ಮಾತಿಲ್ಲ ಎಂದಿದ್ದಾರೆ.

    ವರುಣಾ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಇಲ್ಲಿ ಆರಾಮಾಗಿ ಗೆಲ್ಲುತ್ತೇನೆ. ಮೊದಲಿಗೆ ಇಲ್ಲಿನ ಜನತೆ ಸೋಮಣ್ಣಗೆ ಯಾಕೆ ಮತ ನೀಡಬೇಕು ಕ್ಷೇತ್ರಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.

    ತಿರುಚಿ ಅಪಪ್ರಚಾರ ಮಾಡಿದ್ದಾರೆ

    ಇಲ್ಲಿ ಹಣ ಹಾಗು ಜಾತಿ ರಾಜಕೀಯ ಮಾಡಲಾಗಿದೆ. ಜೆಡಿಎಸ್​ನವರು ಸಹ ಬಿಜೆಪಿಗೆ ಮತ ಹಾಕುವಂತೆ ಹೇಳಿದ್ದಾರೆ. ಆದರೂ ಇಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

    ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಸಂಘಟನೆಗಳನ್ನು ನಾವು ಅಧಿಕಾರಿಕ್ಕೆ ಬಂದ ಕುಡಲೇ ನಿಷೇಧಿಸುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಆದರೆ, ಬಿಜೆಪಿಯವರು ನಾವು ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ತಿರುಚಿದ್ದಾರೆ.

    ಲಿಂಗಾಯತ ನಾಯಕರೆಲ್ಲಾ ಭ್ರಷ್ಟರೆಂದು ನಾನು ಎಲ್ಲಿಯೂ ಹೇಳಿಲ್ಲ. ಬಸವರಾಜ್​ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೇನೆ. ಆದರೆ, ಬಿಜೆಪಿಯವರು ವಿಚಾರವನ್ನು ತಿರುಚಿ ಕಾಂಗ್ರೆಸ್​ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts