ಎನ್.ಆರ್.ಪುರ: ಪಿಸಿಎಆರ್‌ಡಿ ಬ್ಯಾಂಕ್‌ನ 12 ನಿರ್ದೇಶಕ ಸ್ಥಾನಕ್ಕೆ ಭಾನುವಾರ ಕೃಷಿ ಭವನದಲ್ಲಿ 12 ಮತಗಟ್ಟೆಯಲ್ಲಿ ಮತದಾನ ನಡೆಯಿತು. ಸಂಜೆ 4 ಗಂಟೆಗೆ ಮತಎಣಿಕೆ ನಡೆಸಿ 12 ನಿರ್ದೇಶಕರನ್ನು ಆಯ್ಕೆಮಾಡಲಾಯಿತು. ಚುನಾವಣಾಧಿಕಾರಿಯಾಗಿ ಸಿ.ಜಿ.ಶಿವಕುಮಾರ್ ಕಾರ್ಯನಿರ್ವಹಿಸಿದ್ದರು.
ನಂತರ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭದ್ರಾ ಕಾಡ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 7 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಪಕ್ಷದ ಕಾರ್ಯಕರ್ತರು ಮತದಾರನ ಮನೆ ಮನೆಗೆ ಹೋಗಿ ಮತಯಾಚನೆ ಮಾಡಿದ್ದಾರೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯಲಭಿಸಿದೆ.
ಮುಂದಿನ ದಿನಗಳಲ್ಲಿ ನಡೆಯುವ ಸಹಕಾರ ಸಂಘಗಳ ಚುನಾವಣೆಯಲ್ಲೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಸಧೃಢವಾಗಲು ಈ ಚುನಾವಣೆ ಬುನಾದಿಯಾಗಿದೆ ಎಂದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಸುಧಾಕರ, ಕೆ.ಎಸ್.ಅಶ್ವಲ್‌ಗೌಡ, ಶೈಲಾ ಮಹೇಶ್, ಭಾರತಿ, ಸುಂದರೇಶ್, ಕೌಶಿಕ್, ದೇವಂತ್‌ಗೌಡ, ಮುಖಂಡರಾದ ಬಿಳಾಲುಮನೆ ಉಪೇಂದ್ರ, ಸುನೀಲ್ ಕುಮಾರ್, ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್ ನಟರಾಜ, ಮುಖಂಡರಾದ ಇ.ಸಿ.ಜೋಯಿ, ಬಿ.ಎಸ್. ಸುಬ್ರಹ್ಮಣ್ಯ, ಬಿ.ಕೆ.ನಾರಾಯಣಸ್ವಾಮಿ, ಎಂ.ಆರ್.ರವಿಶಂಕರ್, ಎಸ್.ಡಿ.ರಾಜೇಂದ್ರ, ಕರುಗಂದ ನಂದೀಶ್, ಎಚ್.ಎಂ.ಮನು, ಮಾಳೂರು ದಿಣ್ಣೆರಮೇಶ್, ಗುಬ್ಬಿಗಾ ಶಂಕರ್, ಜೋಸ್ ಆನೆಗದ್ದೆ ವೆಂಕಟೇಶ್ ಮತ್ತಿತರರು ಇದ್ದರು.
ಪಿಸಿಎಆರ್‌ಡಿ ಬ್ಯಾಂಕ್‌ನಲ್ಲಿ ಕಾಂಗ್ರೆಸ್ ಮೇಲುಗೈ

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti
ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…
ಬೊಜ್ಜು ಕರಗಿಸಿ ಫಿಟ್ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…
ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips
ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…