ಮೈಸೂರು: ಪ್ರತಿ ಚುನಾವಣೆಗಳಲ್ಲೂ ಫಲಿತಾಂಶಗಳಲ್ಲಿ ವ್ಯತ್ಯಾಸ ಇರುತ್ತದೆ. ಲೋಕಸಭಾ, ವಿಧಾನಸಭಾ, ಸ್ಥಳೀಯ ಚುನಾವಣೆಗಳಲ್ಲಿ ವ್ಯತ್ಯಾಸ ಇರುತ್ತದೆ. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇವಿಎಂ ಯಂತ್ರದ ಮೇಲೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಯಾವ ಕಡೆಗಳಲ್ಲಿ ಬಿಜೆಪಿಗೆ ಹೆಚ್ಚು ಲೀಡ್ ಬಂದಿತ್ತೋ ಅಲ್ಲಿ ಕಾಂಗ್ರೆಸ್ಗೆ ಹೆಚ್ಚು ಲೀಡ್ ಬಂದಿದೆ. ಇದು ಇವಿಎಂ ಯಂತ್ರದ ಮೇಲಿನ ಅನುಮಾನವನ್ನು ಮತ್ತಷ್ಟು ಪುಷ್ಟೀಕರಿಸಿದೆ ಎಂದರು.
ಬಿಜೆಪಿಯವರು ಇವಿಎಂ ಯಂತ್ರವನ್ನು ಮ್ಯಾನುಪ್ಲೇಟ್ ಮಾಡುತ್ತಾರೆ ಎನ್ನುವ ಅನುಮಾನ ಸ್ಥಳೀಯ ಸಂಸ್ಥೆಗಳ ಫಲಿತಾಂಶದಿಂದ ಮತ್ತಷ್ಟು ಸ್ಪಷ್ಟವಾಗಿದ್ದು, ಸಂಶಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು. (ದಿಗ್ವಿಜಯನ್ಯೂಸ್)