More

    ಎಎಪಿ ಪ್ರಣಾಳಿಕೆಯನ್ನು ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್​ ಗೆದ್ದಿದೆ: ಅರವಿಂದ್​ ಕೇಜ್ರಿವಾಲ್​

    ನವದೆಹಲಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದು ಸರ್ಕಾರ ರಚಿಸಿದ್ದು ಮೇ 20ರಂದು ನೂತನ ಸರ್ಕಾರದ ಮುಖ್ಯಮಂತ್ರಿ, ಡಿಸಿಎಂ ಸೇರಿದಂತೆ 8ಮಂದಿ ಸಚಿವರು ಪದಗ್ರಹಣ ಮಾಡಿದ್ಧಾರೆ.

    ಸಭೆ ಒಂದನ್ನು ಉದ್ಧೇಶಿಸಿ ಮಾತನಾಡುವ ವೇಳೆ ದೆಹಲಿ ಮುಖ್ಯಮಂತ್ರಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.

    ನಮ್ಮ ಪ್ರಣಾಳಿಕೆಯಲ್ಲಿ ಗೆದ್ದಿದೆ

    ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ರಚನೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಎಎಪಿ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್ ಆಮ್​ ಆದ್ಮಿ ಪಕ್ಷದ ಪ್ರಣಾಳಿಕೆಯಲ್ಲಿನ ಅಂಶಗಳ ಮೂಲಕ ಅಧಿಕಾರ ಹಿಡಿದಿದೆ ಎಂದು ಟೀಕಿಸಿದ್ದಾರೆ.

    ಬೇರೆ ಪಕ್ಷಗಳು ಶಿಕ್ಷಣ ಹಾಗೂ ಆರೋಗ್ಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿರುವುದರಿಂದ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಎಎಪಿ ಬದಲಾವಣೆ ತಂದಿದೆ ಎಂದು ಹೇಳಿದ್ಧಾರೆ.

    Arvind Kejriwal

    ಬದಲಿಸುವ ಪ್ರಯತ್ನದಲ್ಲಿದೆ

    ಆಮ್​ ಆದ್ಮಿ ಪಕ್ಷವು ರಾಷ್ಟ್ರ ರಾಜಕಾರಣದ ದಿಕ್ಕನ್ನು ಬದಲಿಸುವ ಪ್ರಯತ್ನದಲ್ಲಿದೆ. ಕರ್ನಾಟಕ ವಿಧಾನಸಬೆ ಚುನಾವಣೆಯನ್ನು ಗಮನಿಸಿದರೆ ಕಾಂಗ್ರೆಸ್​ ಪಕ್ಷ ನಮ್ಮ ಪ್ರಣಾಳಿಕೆಯಲ್ಲಿ ಗೆದ್ದಿದೆ ಎಂದು ಲೇವಡಿಯಾಡಿದ್ಧಾರೆ.

    ನಾವು ಉಚಿತ ವಿದ್ಯುತ್​, ಪಡಿತರ, ಮಹಿಳೆಯರಿಗೆ ಹಾಗೂ ಯುವಕರಿಗೆ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದೆವು. ಕಾಂಗ್ರೆಸ್​ ಪಕ್ಷದವರು ಇದನ್ನೇ ಹೇಳಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ ಎಂದು ಸಭೆಯೊಂದರಲ್ಲಿ ಮಾತನಾಡುವ ವೇಳೆ ಹೇಳಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts