More

    ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ

    ಮದ್ದೂರು: ಲೋಕಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭವಾದ ದಿನದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಣರಮಣೇಗೌಡ (ಸ್ಟಾರ್ ಚಂದ್ರು) ಅವರು ಕ್ರಿಯಾಶೀಲವಾಗಿ ಪ್ರಚಾರ ಮಾಡುತ್ತಿದ್ದು, ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

    ತಾಲೂಕಿನ ಕೊಪ್ಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಂಡ್ಯ ಜಿಲ್ಲೆಯವರೇ ಆಗಿದ್ದು, ಇವರನ್ನು ಗೆಲ್ಲಿಸಿದರೆ ನಿಮ್ಮಗೆ ಸುಲಭವಾಗಿ ಸಿಗುತ್ತಾರೆ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂದರು.

    ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾದರೂ ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ. ಈಗ ಹೊರ ಜಿಲ್ಲೆಯಿಂದ ಇಲ್ಲಿಗೆ ಬಂದು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಗೆದ್ದು ಸಂಸದನಾದರೆ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಪರಿಹಾರ ಕೊಡುತ್ತೇನೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ. ಇದಕ್ಕೆ ಜಿಲ್ಲೆಯ ಜನರು ಮನ್ನಣೆ ನೀಡಬಾರದು ಎಂದರು.

    ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಕಾನೂನು ಬದ್ಧವಾಗಿ ನೀಡಬೇಕಾದ ಅನುದಾನ ನೀಡದೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಎನ್‌ಡಿಆರ್‌ಎಫ್‌ಒ 1 ರೂ. ಪರಿಹಾರ ನೀಡಿಲ್ಲ ಮತ್ತು ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ನೀಡದೆ ಅನ್ಯಾಯವೆಸಗಿದೆ. ಈ ಬಗ್ಗೆ ಬಿಜೆಪಿ ಸಂಸದರು ಹಾಗೂ ರಾಜ್ಯದ ನಾಯಕರು ಧ್ವನಿ ಎತ್ತುತ್ತಿಲ್ಲ. ಇವರಿಗೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆಂದು ಎಂದರು.

    ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮುಖಂಡರಾದ ಚಿಕ್ಕೊನಹಳ್ಳಿ ತಮ್ಮಯ್ಯ, ರವಿ, ಕುಮಾರ್‌ಕೊಪ್ಪ, ಸಿ.ಎಂ.ಕ್ರಾಂತಿಸಿಂಹ, ಘಟ್ಟಹಳ್ಳಿ ಹರೀಶ್, ಬೆಕ್ಕಳಲೆ ರಘು, ರಾಮಚಂದ್ರು, ತಮ್ಮಣ್ಣನಾಯಕ, ತೋಯಜಾಕ್ಷ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts