More

    ಅಕ್ರಮ ಹಣ ವರ್ಗಾವಣೆ; ಹಿರಿಯ ಕಾಂಗ್ರೆಸ್​ ನಾಯಕನ ಮನೆ ಮೇಲೆ ED ದಾಳಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಉತ್ತರಾಖಂಡ ಸರ್ಕಾರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್​ ನಾಯಕ ಹರಕ್ ಸಿಂಗ್ ರಾವತ್ ಅವರಿಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

    ಉತ್ತರಾಖಂಡ, ಚಂಡೀಗಢ ಮತ್ತು ದೆಹಲಿ-ಎನ್‌ಸಿಆರ್‌ನ ಹನ್ನೆರಡು ಸ್ಥಳಗಳಲ್ಲಿ ಏಕಕಾಲದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಇದನ್ನೂ ಓದಿ: ತೆರಿಗೆ ವಂಚನೆ; ಬೆಂಗಳೂರಿನ ಖಾಸಗಿ ಕಂಪನಿಗಳ ಮೇಲೆ ಐಟಿ ದಾಳಿ

    ಪಕ್ಷ ವಿರೋಧ ಚಟುವಟಿಕೆ ಕಂಡು ಬಂದ ಹಿನ್ನಲೆಯಲ್ಲಿ 2022 ರಲ್ಲಿ, ಹರಕ್ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಕ್ಯಾಬಿನೆಟ್ ಮತ್ತು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿತ್ತು. 2022ರ ವರ್ಷಾಂತ್ಯದಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರು ಕಾಂಗ್ರೆಸ್​ ಸೇರ್ಪಡೆಯಾಗಿದ್ದರು.

    ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ವಿರುದ್ಧ ಬಂಡಾಯವೆದ್ದು 2016 ರಲ್ಲಿ ಬಿಜೆಪಿಗೆ ಬದಲಾದ ಹತ್ತು ಶಾಸಕರಲ್ಲಿ ಹರಕ್ ಸಿಂಗ್ ರಾವತ್ ಕೂಡ ಒಬ್ಬರಾಗಿದ್ದರು. 2022ರಲ್ಲಿ ಪುನಃ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗುವ ಮೂಲಕ ಸುದ್ದಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts