More

    ವಿಧಾನಸಭೆ ಚುನಾವಣೆ; ಮಧ್ಯಪ್ರದೇಶದಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿದ ಕಾಂಗ್ರೆಸ್​

    ಭೋಪಾಲ್​: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಎಐಸಿಸಿ ಕರ್ನಾಟಕ ಕಾಂಗ್ರೆಸ್​ ಮಾಡೆಲ್​ಅನ್ನು ಮಧ್ಯಪ್ರದೇಶದಲ್ಲಿ ಅನುಸರಿಸಿದೆ.

    ಈ ಕುರಿತು ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ, ಮಧ್ಯಪ್ರದೇಶ ಚುನಾವಣಾ ಉಸ್ತುವಾರಿ ರಣದೀಪ್​ ಸುರ್ಜೇವಾಲಾ ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಪ್ರತಿ ಸಿಲಿಂಡರ್​ಅನ್ನು 500ರೂಪಾಯಿಗೆ ನೀಡಲಾಗುವುದು. ಮಹಿಳೆಯರಿಗೆ ಪ್ರತಿತಿಂಗಳು 1,500 ರೂಪಾಯಿಯನ್ನು ನೀಡಲಾಗುವುದು.

    ಇದನ್ನೂ ಓದಿ: ಕದ್ರಿ ಮಂಜುನಾಥನ ದೇವಾಲಯವೇ ಉಗ್ರ ಅರಾಫತ್​ ಅಲಿಯ ಟಾರ್ಗೆಟ್​; NIA ತನಿಖೆ ವೇಳೆ ಹೊರಬಂತು ಸ್ಪೋಟಕ ಸತ್ಯ

    ಪ್ರತಿ ತಿಂಗಳು 200 ಯೂನಿಟ್​ವರೆಗೆ ಉಚಿತ ವಿದ್ಯುತ್​ ನೀಡಲಾಗುವುದು. ಹಿಂದುಳಿದವರಿಗೆ ಶೇ. 27ರಷ್ಟು ಮೀಸಲಾತಿ ಸೇರಿದಂತೆ ಅನೇಕ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ಧಾರೆ. ಜನರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತಿದ್ದು, ಈ ಬಾರಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಗೆಲ್ಲುವುದು ನಿಶ್ಚಿತ ಎಂದು ರಣದೀಪ್​​ ಸುರ್ಜೇವಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಒಂದು ವೇಳೆ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುರ್ಜೇವಾಲಾ, ಅದನ್ನು ಕಾಂಗ್ರೆಸ್​ ಹೈಕಮಾಂಡ್​ ನಿರ್ಧರಿಸಲಿದೆ. ಕಮಲನಾಥ್​ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಹಾಗೂ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ನಿರ್ಧರಿಸಲಿದೆ ಎಂದು ತಿಳಿಸಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts