More

    ಕಾಂಗ್ರೆಸ್​ಗೆ ಶಾಕ್ ಮೇಲೆ ಶಾಕ್: ಪ್ರಚಾರಕ್ಕೆ ಹಣದ ಕೊರತೆ, ಸ್ಪರ್ಧೆಯಿಂದ ಹಿಂದೆ ಸರಿದ ಅಭ್ಯರ್ಥಿ!

    ಪುರಿ: ಅತಿದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಚುನಾವಣೆಗೂ ಮುನ್ನವೇ ಹಿನ್ನಡೆ ಎದುರಿಸುತ್ತಿದೆ. ಲೋಕಸಭೆ ಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಭ್ಯರ್ಥಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ.

    ಇದನ್ನೂ ಓದಿ: ಹುಬ್ಬಳ್ಳಿ: ಹಿಂದು ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಆರೋಪಿ ವಶಕ್ಕೆ!

    ಹೌದು.. ಪುರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತಾ ಅವರು ತಮ್ಮ ಟಿಕೆಟ್ ವಾಪಸ್ ನೀಡಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಪಕ್ಷವು ನನಗೆ ಚುನಾವಣಾ ನಿಧಿಯನ್ನು ನಿರಾಕರಿಸಿದೆ ಎಂದು ಮೊಹಾಂತಿ ಹೇಳಿಕೊಂಡಿದ್ದಾರೆ. ಇಲ್ಲಿ ಬಿಜೆಪಿಯ ನಾಯಕ ಸಂಬಿತ್ ಪಾತ್ರಾ ಬಿಜೆಪಿಯಿಂದ ಸ್ಪರ್ಧಿಸಿದ್ದು, ಇದೀಗ ಸುಚರಿತಾ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿರುವುದರಿಂದ ಸಂಬಿತ್ ಪಾತ್ರ ಹಾದಿ ಸುಗಮವಾಗಿದೆ.

    ಈ ಕುರಿತು ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದು ಸಂಘಟನೆ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಬರೆದಿರುವ ಪತ್ರ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿದ ಕಾಂಗ್ರೆಸ್​ ನಾಯಕಿ ಮೊಹಾಂತಿ ಅವರು, ಕಾಂಗ್ರೆಸ್​ ಪಕ್ಷವು ನನಗೆ ಹಣ ನೀಡಲು ನಿರಾಕರಿಸಿದ ಕಅರಣ ನಾನು ಟಿಕೆಟ್​ ಹಿಂತಿರುಗಿಸಿದ್ದೇನೆ. ಹಾಗೂ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಕೆಲವು ಸ್ಥಾನಗಳಲ್ಲಿ ಗೆಲ್ಲುವ ಅಭ್ಯರ್ಥಿಗಳು ಇಲ್ಲದಿರುವುದು ಕೆಲವು ದುರ್ಬಲ ಅಭ್ಯರ್ಥಿಗಳಿಗೆ ಟಿಕೆಟ್ ಸಿಕ್ಕಿದೆ. ನನಗೆ ಈ ರೀತಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ನೇರವಾಗಿ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

    2014ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಪಿನಾಕಿ ಮಿಶ್ರಾ ವಿರುದ್ಧ ಮೊಹಾಂತಿ ಸೋತಿದ್ದರು. ಮಿಶ್ರಾ 5,23,161 ಮತಗಳನ್ನು ಗಳಿಸಿದರೆ, ಮೊಹಾಂತಿ 2,89,800 ಮತಗಳನ್ನು ಗಳಿಸಿದರು. ಒಡಿಶಾದಲ್ಲಿ ಲೋಕಸಭೆ ಚುನಾವಣೆ ನಾಲ್ಕು ಹಂತಗಳಲ್ಲಿ ನಡೆಯಲಿದೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್‌ಗೆ ಈ ಹೊಡೆತ ಬಿದ್ದಿದೆ.

    ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ: ಹೈಕೋರ್ಟ್​ಗೆ ಪೊಲೀಸರ ಅಂತಿಮ ವರದಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts